ಜಾಲ್ಸೂರಿನಲ್ಲಿ ಸಾಮಾಜಿಕ ಜಾಗೃತಿ ಮೂಡಿಸಿದ ಬೀದಿ ನಾಟಕ

ಜಾಲ್ಸೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌(ರಿ.) ಸುಳ್ಯ ತಾಲೂಕು ಜಾಲ್ಸೂರು ವಲಯದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದ ಅಂಗವಾಗಿ ಜಾಲ್ಸೂರು ಶ್ರೀ ಗುರು ರಾಘವೇಂದ್ರ ಭಜನಾ ಮಂದಿರದ ವಠಾರದಲ್ಲಿ ಸಾಮಾಜಿಕ ಜಾಗೃತಿ ಮೂಡಿಸುವ ವಿಶೇಷ ಬೀದಿ ನಾಟಕ ಕಾರ್ಯಕ್ರಮ ನಡೆಯಿತು.

. . . . . . . . .

ಶ್ರೀ ಗುರು ರಾಘವೇಂದ್ರ ಭಜನಾ ಮಂದಿರದ ಅಧ್ಯಕ್ಷ ಜಯರಾಮ ರೈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, “ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಹಲವು ವರ್ಷಗಳಿಂದ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದ್ದು, ಇಂತಹ ಕಾರ್ಯಕ್ರಮಗಳಿಂದ ಜನರಲ್ಲಿ ಸಾಮಾಜಿಕ ಅರಿವು ಮೂಡಲು ಸಾಧ್ಯವಾಗುತ್ತಿದೆ” ಎಂದರು.

. . . . . . .

ಕಲಾಮಾಯೆ ಆರ್ಟ್ಸ್ ತಂಡ ಪಂಜ-ಏನೆಕಲ್‌ನ ಕಲಾವಿದರು ಸಾಮಾಜಿಕ ಜಾಲತಾಣಗಳ ದುಷ್ಪರಿಣಾಮಗಳು, ನೀರು ಸಂರಕ್ಷಣೆ, ಪರಿಸರ ಸಂರಕ್ಷಣೆ, ವಾಹನ ಚಾಲನೆಯ ಸಂದರ್ಭದಲ್ಲಿ ಪಾಲಿಸಬೇಕಾದ ಸಂಚಾರ ನಿಯಮಗಳು, ಕಸ ವಿಲೇವಾರಿ ಹಾಗೂ ಆರೋಗ್ಯ ರಕ್ಷಣೆಯಂತಹ ವಿವಿಧ ವಿಷಯಗಳ ಕುರಿತು ಬೀದಿ ನಾಟಕದ ಮೂಲಕ ಪರಿಣಾಮಕಾರಿ ಸಂದೇಶ ನೀಡಿದರು.

ಕಾರ್ಯಕ್ರಮದಲ್ಲಿ ಅಂಜನಾದ್ರಿ ಒಕ್ಕೂಟದ ಅಧ್ಯಕ್ಷೆ ಯಶೋಧ, ಜಾಲ್ಸೂರು ಒಕ್ಕೂಟದ ಅಧ್ಯಕ್ಷ ನವೀನ್ ಕುಮಾರ್, ವಲಯ ಮೇಲ್ವಿಚಾರಕಿ ಜಯಶ್ರೀ, ಜ್ಞಾನವಿಕಾಸ ಕೇಂದ್ರ ಹಾಗೂ ಒಕ್ಕೂಟದ ಸದಸ್ಯರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದು, ಬೀದಿ ನಾಟಕವನ್ನು ವೀಕ್ಷಿಸಿದರು.

ತಾಲೂಕಿನ ಜ್ಞಾನವಿಕಾಸ ಸಮನ್ವಯಾಧಿಕಾರಿ ಸುಜಾತ ಕಾರ್ಯಕ್ರಮ ನಿರೂಪಿಸಿದರು. ಸಂಯೋಜಕಿ ಮಲ್ಲಿಕಾ ಸ್ವಾಗತಿಸಿದರು. ಸೇವಾ ಪ್ರತಿನಿಧಿ ಚಂದ್ರಕಲಾ ವಂದಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading