ಹರಿಹರ ಪಳ್ಳತ್ತಡ್ಕ : ಸೆ.24ರಂದು ಕಸ್ತೂರಿ ರಂಗನ್ ವರದಿಯ ಕುರಿತು ವಿಶೇಷ ಗ್ರಾಮಸಭೆ ; ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರು ಭಾಗವಹಿಸುವಂತೆ ಮನವಿ

ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಸಂಬಂಧಿಸಿದಂತೆ ಕಾರ್ಯನಿರ್ವಾಹಕ ಅಧಿಕಾರಿಗಳ ಆದೇಶದಂತೆ ಹಾಗೂ ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆಯಲ್ಲಿ ನಿರ್ಣಯಿಸಿ ಸಾರ್ವಜನಿಕ ಸಹಿ ಸಂಗ್ರಹದೊಂದಿಗೆ ಸಲ್ಲಿಸಿದ ಕೋರಿಕೆಯಂತೆ ಕಸ್ತೂರಿ ರಂಗನ್ ವರದಿಯಡಿ ಪ್ರಸ್ತಾಪಿಸಲಾಗಿರುವ ಪ್ರದೇಶಗಳು ಹಾಗೂ ಅದರ ಪರಿಣಾಮಗಳಿಗೆ ಸಂಬಂಧಿಸಿದಂತೆ ಗ್ರಾಮಸ್ಥರ ಆಕ್ಷೇಪಣೆಗಳು, ಸಲಹೆಗಳು ಹಾಗೂ ಅಭಿಪ್ರಾಯಗಳನ್ನು ಪಡೆಯುವ ಉದ್ದೇಶದಿಂದ ಸೆ.24ನೇ ಗುರುವಾರದಂದು ಪೂರ್ವಾಹ್ನ 10:30ಕ್ಕೆ ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ವಿಶೇಷ ಗ್ರಾಮ ಸಭೆಯನ್ನು ಆಯೋಜಿಸಲಾಗಿದ್ದು, ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಭಯ ಗ್ರಾಮಗಳ ಗ್ರಾಮಸ್ಥರು ಈ ಸಭೆಯಲ್ಲಿ ಭಾಗವಹಿಸಿ ಕಸ್ತೂರಿ ರಂಗನ್ ವರದಿಯ ಕುರಿತು ಮಾಹಿತಿ ಪಡೆದುಕೊಂಡು ತಮ್ಮ ಅಭಿಪ್ರಾಯಗಳನ್ನು ಮಂಡಿಸಬೇಕೆಂದು ಗ್ರಾಮ ಪಂಚಾಯತ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading