ಜೆಇಇ ಪರೀಕ್ಷೆಯಲ್ಲಿ ಸಾಧನೆಗೈದ ದೀಕ್ಷಿತ್ ಸಿ.ಎಸ್. ಅವರಿಗೆ ಮುಖ್ಯಮಂತ್ರಿಗಳಿಂದ ಪುರಸ್ಕಾರ

ಸುಳ್ಯ: ಮೊರಾರ್ಜಿ ದೇಸಾಯಿ ವಸತಿ ಶಾಲೆ, ಮೂಲ್ಕಿ, ಮಂಗಳೂರಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ಅತ್ಯುತ್ತಮ ಸಾಧನೆಗೈದ ದೀಕ್ಷಿತ್ ಸಿ.ಎಸ್. ಅವರು ಜೆಇಇ (Mains) ಪರೀಕ್ಷೆಯಲ್ಲಿಯೂ ಉತ್ತಮ ಸಾಧನೆ ಮಾಡಿ, ರಾಷ್ಟ್ರಮಟ್ಟದ ಪ್ರತಿಷ್ಠಿತ ಸಂಸ್ಥೆಯಾದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಇನ್‌ಫರ್ಮೇಷನ್ ಟೆಕ್ನಾಲಜಿ (IIIT), ಧಾರವಾಡದಲ್ಲಿ ಕಂಪ್ಯೂಟರ್ ಎಂಜಿನಿಯರಿಂಗ್ ಕೋರ್ಸ್‌ಗೆ ಆಯ್ಕೆಯಾಗಿ ಪ್ರವೇಶ ಪಡೆದಿದ್ದಾರೆ.

. . . . . . . . .

ಅವರ ಈ ಸಾಧನೆಯನ್ನು ಗುರುತಿಸಿ ಸೆಪ್ಟೆಂಬರ್ 15ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳು ದೀಕ್ಷಿತ್ ಸಿ.ಎಸ್. ಅವರನ್ನು ಪುರಸ್ಕರಿಸಿದರು.

. . . . . . .

ದೀಕ್ಷಿತ್ ಅವರು ಜಟ್ಟಿಪಳ್ಳ ನಿವಾಸಿ ಚಂದ್ರಶೇಖರ ನಾಯ್ಕ ಹಾಗೂ ಕೊಡಿಯಾಲಬೈಲ್ ಅಂಗನವಾಡಿ ಕಾರ್ಯಕರ್ತೆ ಸುಶೀಲ ದಂಪತಿಯ ಪುತ್ರರಾಗಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading