ತುಳು ಭಾಷೆಗೆ ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷಾ ಸ್ಥಾನಮಾನ – ಸುಳ್ಯ ಕಾಂಗ್ರೆಸ್ ಸಂಭ್ರಮಾಚರಣೆ

. . . . . . . . .

ತುಳು ಭಾಷೆಗೆ ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷಾ ಸ್ಥಾನಮಾನ ನೀಡಿ ಮಹತ್ವದ ನಿರ್ಧಾರವನ್ನು ನಿನ್ನೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಾನ್ಯ ಮುಖ್ಯಮಂತ್ರಿ  ಡಿ ಕೆ ಶಿವಕುಮಾರ್ ಹಾಗೂ ಸಚಿವ ಸಂಪುಟದ ಸದಸ್ಯರು ತೆಗೆದುಕೊಂಡು, ಸಮಸ್ತ ತುಳು ಭಾಷಿಕರ ದಶಕಗಳ ಬೇಡಿಕೆಯನ್ನು ಈಡೇರಿಸಿರುವ ಹಿನ್ನೆಲೆಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಾಧಾಕೃಷ್ಣ ಬೊಳ್ಳೂರು ನೇತೃತ್ವದಲ್ಲಿ ಸಂಭ್ರಮಾಚರಣೆಯನ್ನು ಸೆ. 19ರಂದು ಸಂಜೆ ಸುಳ್ಯದ ಖಾಸಗಿ ಬಸ್ಸು ನಿಲ್ದಾಣದ ಬಳಿ ಆಯೋಜಿಸಲಾಯಿತು.

. . . . . . .

ಈ ಸಂದರ್ಭದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಮಾತನಾಡುತ್ತಾ ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಣೆ ನಡೆಸುವುದರ ಜೊತೆಗೆ ಕರಾವಳಿ ಕರ್ನಾಟಕದ ಅಭಿವೃದ್ಧಿಗಾಗಿ 32ಸಾವಿರ ಕೋಟಿ ಅನುದಾನ ಘೋಷಣೆ ನಡೆಸಿದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿ.ಕೆ ಶಿವಕುಮಾರ್ ಹಾಗೂ ಸಚಿವ ಸಂಪುಟದ ಸದಸ್ಯರು ಮತ್ತು ಈ ಕಾರ್ಯಕ್ಕಾಗಿ ಸದಾ ಪ್ರಯತ್ನ ನಡೆಸಿದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಯು.ಟಿ ಖಾದರ್ ಹಾಗೂಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಅಶೋಕ್ ರೈ ಯವರಿಗೆ ಬ್ಲಾಕ್ ಕಾಂಗ್ರೆಸ್ ಸಮಿತಿ ಸುಳ್ಯ ಪರವಾಗಿ ಅಭಿನಂದನೆ ಸಲ್ಲಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸದಸ್ಯ ನಂದರಾಜ್ ಸಂಕೇಶ ಮಾತನಾಡಿ ತುಳು ಭಾಷೆಯ ಸೊಗಡನ್ನು ವಿಸ್ತ್ರತವಾಗಿ ವಿವರಿಸಿ ತುಳುವರ ದಶಕಗಳ ಬೇಡಿಕೆಗೆ ರಾಜ್ಯ ಸರಕಾರ ಮನ್ನಣೆ ನೀಡಿದೆ. ಆ ಮೂಲಕ ಮುಂದೆ ತುಳು ಭಾಷೆಯನ್ನು 8ನೇ ಪರಿಚ್ಚೇದಕ್ಕೆ ಸೇರಿಸಲು ಶಕ್ತಿ ಬಂದಂತಾಗಿದೆ ಎಂದು ಹೇಳಿದರು.

ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಮುಸ್ತಫಾ ಸುಳ್ಯ ಹಾಗೂ ರಾಜ್ಯ ಅರೆಭಾಷೆ ಅಕಾಡೆಮಿ ಸದಸ್ಯ ಜ್ಞಾನೇಶ್ ನಿಡ್ಯಮಲೆ ಶುಭ ಹಾರೈಸಿದರು.

ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಭವಾನಿಶಂಕರ್ ಕಲ್ಮಡ್ಕ ಸ್ವಾಗತಿಸಿ, ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ ಧನ್ಯವಾದ ಸಲ್ಲಿಸಿದರು.

ಸಂಭ್ರಮಾಚರಣೆಯಲ್ಲಿ ಸುಳ್ಯ ನಗರ ಪಂಚಾಯತ್ ನಾಮ ನಿರ್ದೇಶಿತ ಸದಸ್ಯ ಶ್ರೀ ರಾಜು ಪಂಡಿತ್ ಉಪಸ್ಥಿತರಿದ್ದು ಸಿಡಿಮದ್ದು ಪ್ರಾಯೋಜಿಸಿದರು.

ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ.ಕೆ ಹಮೀದ್, ಬೆಳ್ಳಾರೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಮಣಿಕಂಠ ಕಲ್ಲೋಣಿ, ಸುಳ್ಯ ತಾಲೂಕು ಇಂಟಕ್ ಸ್ನೇಹ ಸಂಗಮ ರಿಕ್ಷಾ ಯೂನಿಯನ್ ಅಧ್ಯಕ್ಷ ಪದ್ಮನಾಭ ಹರ್ಲಡ್ಕ, ಸುಳ್ಯ ಬ್ಲಾಕ್ ಕಾಂಗ್ರೆಸ್ ಮಾಜಿ ಪ್ರಧಾನ ಕಾರ್ಯದರ್ಶಿ ಪಿ.ಎಸ್ ಗಂಗಾಧರ, ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಎಸ್.ಕೆ ಹನೀಫ್, ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಗೂನಡ್ಕ, ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ವಿನೀತ್ ಬಾರ್ಪಣೆ, ರಾಜಶೇಖರ್ ಮೇದಿನಡ್ಕ, ಪ್ರೇಮಾಹರೀಶ್ವರನ್ ಅಡ್ಯಡ್ಕ, ಪುಣ್ಯಮೂರ್ತಿ, ಪ್ರಮುಖರಾದ ಮಂಜುನಾಥ ಮಡ್ತಿಲ, ಬೋಜಪ್ಪ ನಾಯ್ಕ ಅಡ್ಕಾರು, ಕೃಷ್ಣ ಸ್ವಾಮಿ ಕಂದಡ್ಕ, ರಫೀಕ್ ಪಡು, ಜೂಲಿಯಾನ ಕ್ರಾಸ್ತಾ, ಡೇವಿಡ್ ಧೀರಾ ಕ್ರಾಸ್ತಾ, ಚಂದ್ರನ್ ಕೂಟೇಲು, ಗಣೇಶ್ ಬೀರಮಂಗಲ, ಕೇಶವ ಮೊರಂಗಲ್ಲು, ಶಾಹೀದ್ ಪಾರೆ, ಮಂಜುನಾಥ ಕಂದಡ್ಕ, ಮಹೇಶ್ ಬೆಳ್ಳಾರ್ಕರ್, ಭಾಗೀಶ್ ಕೆ. ಟಿ, ವಿಜಯಕುಮಾರ್ ನರಿಯೂರು, ಜುಬೈರ್ ಅರಂತೋಡು, ಸಂತೋಷ್ ರೈ ದೇವಸ್ಯ ಮತ್ತಿತರರು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading