ಜಾಲ್ಸೂರು ಪೇಟೆಯಲ್ಲಿ ಬೀದಿ ನಾಯಿಗಳ ಹಾವಳಿ – ಜನರಲ್ಲಿ ಆತಂಕ ; ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯ

ಜಾಲ್ಸೂರು : ಜಾಲ್ಸೂರು ಪೇಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದಾರೆ.

. . . . . . . . .

ಪೇಟೆಯ ಪ್ರಮುಖ ರಸ್ತೆಗಳು ಹಾಗೂ ವಸತಿ ಪ್ರದೇಶಗಳಲ್ಲಿ ಗುಂಪು ಗುಂಪಾಗಿ ಸಂಚರಿಸುತ್ತಿರುವ ಬೀದಿ ನಾಯಿಗಳು ವಾಹನ ಸವಾರರು, ಪಾದಚಾರಿಗಳು ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ತೊಂದರೆ ಉಂಟುಮಾಡುತ್ತಿವೆ. ರಾತ್ರಿ ವೇಳೆ ನಾಯಿಗಳ ಹಾವಳಿ ಮತ್ತಷ್ಟು ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಭಯದಿಂದ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

. . . . . . .

ಬೀದಿ ನಾಯಿಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಹಾಗೂ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಂಡು, ನಾಯಿಗಳ ಹಾವಳಿಯನ್ನು ನಿಯಂತ್ರಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading