ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ತಾಂತ್ರಿಕ ಉಪನ್ಯಾಸ ಮತ್ತು ಪ್ರಾಯೋಗಿಕ ತರಬೇತಿ

ಸುಳ್ಯ: ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮೆಕ್ಯಾನಿಕಲ್ ಇಂಜಿನಿಯರಿಂಗ್ ಅಸೋಸಿಯೇಶನ್ (MEA) ವತಿಯಿಂದ ‘ಎನರ್ಜಿ ಆಡಿಟಿಂಗ್’ ವಿಷಯದ ಕುರಿತು ತಾಂತ್ರಿಕ ಉಪನ್ಯಾಸ ಹಾಗೂ ಪ್ರಾಯೋಗಿಕ ತರಬೇತಿ ಕಾರ್ಯಕ್ರಮವು ಸೆ.18ರಂದು ನಡೆಯಿತು.

. . . . . . . . .

ಮೈಸೂರಿನ ರಚನಾ ಎನರ್‌ಕೇರ್‌ನ ಎನರ್ಜಿ ಕನ್ಸಲ್ಟೆಂಟ್ ಹಾಗೂ ಕಣ್ಣೂರು ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ. ಕೆ. ಗಂಗಾಧರ ನಾಯರ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, “A Technical Talk and Hands-on Session on Energy Auditing” ವಿಷಯದ ಕುರಿತು ವಿದ್ಯಾರ್ಥಿಗಳಿಗೆ ಉಪನ್ಯಾಸ ಹಾಗೂ ಪ್ರಾಯೋಗಿಕ ತರಬೇತಿ ನೀಡಿದರು.

. . . . . . .

ಪ್ರಸ್ತುತ ಇಂಧನದ ಮೇಲಿನ ಅವಲಂಬನೆ, ಅದರ ಬಳಕೆ, ಪರ್ಯಾಯ ಇಂಧನ ಸಂಪನ್ಮೂಲಗಳು ಹಾಗೂ ಮುಂಬರುವ ಇಂಧನ ಕೊರತೆ ಮತ್ತು ಬಿಕ್ಕಟ್ಟನ್ನು ಎದುರಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅವರು ಮಾಹಿತಿ ನೀಡಿದರು. ಹವಾಮಾನ ಬದಲಾವಣೆ ಹಾಗೂ ಹೆಚ್ಚುತ್ತಿರುವ ಇಂಧನ ಬೇಡಿಕೆಯಿಂದಾಗಿ ಇಂಧನ ಬಿಕ್ಕಟ್ಟು ಜಾಗತಿಕ ಮಟ್ಟದ ಪ್ರಮುಖ ಸಮಸ್ಯೆಯಾಗಿ ಪರಿಣಮಿಸುತ್ತಿದೆ. ಈ ಹಿನ್ನೆಲೆಯಲ್ಲಿ ಭವಿಷ್ಯದ ಸವಾಲುಗಳನ್ನು ಎದುರಿಸಲು ಇಂದಿನಿಂದಲೇ ಸನ್ನದ್ಧರಾಗಬೇಕಿದೆ ಎಂದು ಅವರು ತಿಳಿಸಿದರು.

ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ (BEE) ಹಾಗೂ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ (KREDL) ನೀತಿ ಮತ್ತು ತಂತ್ರಗಳನ್ನು ಒಳಗೊಂಡಂತೆ ಎನರ್ಜಿ ಆಡಿಟ್ ವರದಿ ಸಿದ್ಧಪಡಿಸುವ ವಿಧಾನಗಳ ಕುರಿತು ಅವರು ವಿವರಿಸಿದರು. ಎನರ್ಜಿ ಆಡಿಟಿಂಗ್ ಮತ್ತು ಮ್ಯಾನೇಜ್‌ಮೆಂಟ್, ಯಂತ್ರ ಅಥವಾ ಸಣ್ಣ ಕೈಗಾರಿಕಾ ಘಟಕಗಳಲ್ಲಿ ಇಂಧನ ಬಳಕೆಯ ಪರಿಶೀಲನೆ, ವಿದ್ಯುತ್ ಅಂಕಿ-ಅಂಶಗಳ ಪರಿಶೀಲನೆ, ಶಕ್ತಿ ನಿರ್ವಹಣಾ ವಿಧಾನಗಳು, ದತ್ತಾಂಶ ಸಂಗ್ರಹಣೆ ಮತ್ತು ವಿಶ್ಲೇಷಣೆ ಹಾಗೂ ಕ್ರಿಯಾ ಯೋಜನೆ ರೂಪಿಸುವ ಕುರಿತು ಪ್ರಾಯೋಗಿಕ ತರಬೇತಿ ನೀಡಲಾಯಿತು.

ವಿಭಾಗ ಮುಖ್ಯಸ್ಥ ಪ್ರೊ. ರಾಘವೇಂದ್ರ ಬಿ. ಕಾಮತ್ ಮಾತನಾಡಿ, ವಿದ್ಯಾರ್ಥಿಗಳು ಇಂಧನ ಲೆಕ್ಕಪರಿಶೋಧನೆ ಮತ್ತು ನಿರ್ವಹಣೆ ಕುರಿತ ಪ್ರಮಾಣಪತ್ರ ಪಡೆದು ಎನರ್ಜಿ ಆಡಿಟರ್ ಆಗುವ ಅವಕಾಶವಿದೆ. ಇದು ವಿದ್ಯಾರ್ಥಿಗಳಿಗೆ ಹೊಸ ಉದ್ಯೋಗಾವಕಾಶಗಳತ್ತ ಮುನ್ನಡೆಯಲು ಸಹಕಾರಿಯಾಗಲಿದ್ದು, ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ವಿದ್ಯಾರ್ಥಿ ಶಿವಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಗಗನ್ ಸ್ವಾಗತಿಸಿದರು. ವಿದ್ಯಾರ್ಥಿನಿ ಜೀವಿತಾ ಅತಿಥಿ ಪರಿಚಯ ಮಾಡಿಕೊಟ್ಟರು. ರಂಜಿತ್ ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading