ಬ್ಯಾಂಕ್ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಸೆ.27ರಂದು ಆದಿತ್ಯವಾರ ಗ್ರಾಹಕರಿಗೆ ಬ್ಯಾಂಕಿಂಗ್ ಸೇವೆ ಲಭ್ಯ

ನವದೆಹಲಿ: ಬ್ಯಾಂಕ್ ಸಂಘಟನೆಗಳ ಸಂಯುಕ್ತ ವೇದಿಕೆ (ಯುಎಫ್‌ಬಿಯು) ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಗ್ರಾಹಕರಿಗೆ ತೊಂದರೆಯಾಗದಂತೆ, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳು ಸೇರಿದಂತೆ ಎಲ್ಲ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳು ಈ ಭಾನುವಾರ (ಸೆ.27) ತೆರೆದಿರಲಿವೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.

. . . . . . . . .

ಸೋಮವಾರದಿಂದ ಬುಧವಾರದವರೆಗೆ ಯುಎಫ್‌ಬಿಯು ಮುಷ್ಕರಕ್ಕೆ ಕರೆ ನೀಡಿದೆ. ಸಾರ್ವಜನಿಕರಿಗೆ ಅಗತ್ಯ ಬ್ಯಾಂಕಿಂಗ್ ಸೇವೆಗಳು ನಿರಂತರವಾಗಿ ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ಭಾನುವಾರ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳು ಹಾಗೂ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಎಲ್ಲ ಬ್ಯಾಂಕ್ ಶಾಖೆಗಳು, ಕಚೇರಿಗಳು ಹಾಗೂ ಕರೆನ್ಸಿ ಸಂಗ್ರಹ ಕೇಂದ್ರಗಳು ಸೆ.27ರಂದು ಪೂರ್ಣ ಪ್ರಮಾಣದಲ್ಲಿ ಕರ್ತವ್ಯ ನಿರ್ವಹಿಸಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಅನುಮತಿ ನೀಡಿದೆ ಎಂದು ಸಚಿವಾಲಯ ತಿಳಿಸಿದೆ.

. . . . . . .

ಯುಎಫ್‌ಬಿಯು ಬೇಡಿಕೆಗಳು
ವಾರದಲ್ಲಿ ಐದು ದಿನಗಳ ಕೆಲಸದ ಪದ್ಧತಿ ಜಾರಿಗೆ ತರಬೇಕು ಎಂಬುದು ಯುಎಫ್‌ಬಿಯು ಪ್ರಮುಖ ಬೇಡಿಕೆಗಳಲ್ಲಿ ಒಂದಾಗಿದೆ. ಇದರ ಜೊತೆಗೆ ಪಿಂಚಣಿ ಹೆಚ್ಚಳ, ಎಲ್ಲ ಪಿಂಚಣಿದಾರರಿಗೆ ಸಮಾನವಾಗಿ ಅನ್ವಯವಾಗುವ ತುಟ್ಟಿಭತ್ಯೆ ಸೂತ್ರ ಜಾರಿ ಹಾಗೂ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (ಎನ್‌ಪಿಎಸ್) ವ್ಯಾಪ್ತಿಯಲ್ಲಿರುವ ನೌಕರರಿಗೆ ಹಳೆ ಪಿಂಚಣಿ ವ್ಯವಸ್ಥೆ (ಒಪಿಎಸ್)ಗೆ ವರ್ಗಾವಣೆಯಾಗಲು ಅವಕಾಶ ಕಲ್ಪಿಸಬೇಕು ಎಂಬ ಬೇಡಿಕೆಗಳನ್ನೂ ಸಂಘಟನೆ ಮುಂದಿಟ್ಟಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading