ಕಸ್ತೂರಿರಂಗನ್ ವರದಿ ಕೈಬಿಡುವಂತೆ ಆಗ್ರಹಿಸಿ ಅ.8ರಂದು ಸುಳ್ಯದಲ್ಲಿ ಬೃಹತ್ ಪ್ರತಿಭಟನಾ ಸಭೆ

ಸುಳ್ಯ: ಕಸ್ತೂರಿರಂಗನ್ ವರದಿಯನ್ನು ಸಂಪೂರ್ಣವಾಗಿ ಕೈಬಿಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಅ.8ರಂದು ಸುಳ್ಯದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ.

. . . . . . . . .

ಅ.8ರಂದು ಗುರುವಾರ ಬೆಳಿಗ್ಗೆ 10.30ಕ್ಕೆ ಸುಳ್ಯ ಚೆನ್ನಕೇಶವ ದೇವಸ್ಥಾನದ ಬಳಿ ಪ್ರತಿಭಟನಾ ಸಭೆ ನಡೆಯಲಿದೆ ಎಂದು ವೇದಿಕೆ ತಿಳಿಸಿದೆ.

. . . . . . .

ರಾಜ್ಯ ಮತ್ತು ಕೇಂದ್ರ ಸರಕಾರಗಳು ಕಸ್ತೂರಿರಂಗನ್ ವರದಿಯನ್ನು ಸಂಪೂರ್ಣವಾಗಿ ಕೈಬಿಡಬೇಕು. ಯಾವುದೇ ರೀತಿಯ ಸೂಕ್ಷ್ಮ ವಲಯ ಘೋಷಣೆಯಲ್ಲಿ ಗ್ರಾಮಗಳ ಹೆಸರನ್ನು ಕೈಬಿಡಬೇಕು. ಪಶ್ಚಿಮ ಘಟ್ಟ ಹಾಗೂ ಜನವಸತಿ ಪ್ರದೇಶಗಳಿಗೆ ಸ್ಪಷ್ಟ ಗಡಿಗುರುತು ಮಾಡಿ ಶೂನ್ಯ ಬಫರ್ ಜೋನ್ ಘೋಷಣೆ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಲಿದ್ದಾರೆ.

ಅಲ್ಲದೆ, ಆನೆ ದಾಳಿಯಿಂದ ಮೃತಪಟ್ಟವರ ಕುಟುಂಬಗಳಿಗೆ ಒಂದು ಕೋಟಿ ರೂ. ಪರಿಹಾರ ನೀಡಬೇಕು ಹಾಗೂ ಕುಟುಂಬದ ಒಬ್ಬರಿಗೆ ಸರಕಾರಿ ಉದ್ಯೋಗ ನೀಡಬೇಕು. ಕೃಷಿಗೆ ಹಾನಿ ಉಂಟುಮಾಡುವ ಪ್ರಾಣಿಗಳನ್ನು ಪಶ್ಚಿಮ ಘಟ್ಟದ ಕಾಡಿಗೆ ಸ್ಥಳಾಂತರಿಸಬೇಕು ಎಂಬ ಬೇಡಿಕೆಗಳನ್ನೂ ಮುಂದಿಡಲಾಗಿದೆ.

ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ರಾಜ್ಯ ಸಂಚಾಲಕ ಕಿಶೋರ್ ಶಿರಾಡಿ ಅವರು ಪ್ರತಿಭಟನಾ ಸಭೆಯಲ್ಲಿ ಮುಖ್ಯವಾಗಿ ಭಾಗವಹಿಸಲಿದ್ದಾರೆ.

ವೇದಿಕೆಯ ಸುಳ್ಯ ತಾಲೂಕು ಸಂಪರ್ಕ ಪ್ರಮುಖರಾದ ಅವಿನಾಶ್ ಡಿ.ಕೆ. ಹಾಗೂ ಭುವನೇಂದ್ರ ದಾಸ್ ಉಬರಡ್ಕ ಅವರು ಪ್ರತಿಭಟನಾ ಸಭೆಗೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading