ತೆಲಂಗಾಣ ಬಿಜೆಪಿ ಸಹ ಸಂಘಟನಾ ಕಾರ್ಯದರ್ಶಿಯಾಗಿ ದಶರಥ ವೈಲಾಯ

ಮಂಡೆಕೋಲು ಗ್ರಾಮದ ಪುತ್ಯ ದಶರಥ ವೈಲಾಯ ಅವರು ತೆಲಂಗಾಣ ರಾಜ್ಯ ಭಾರತೀಯ ಜನತಾ ಪಕ್ಷದ ಸಹ ಸಂಘಟನಾ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

. . . . . . . . .

ಅವರು ಅರವಿಂದ ವೈಲಾಯ ಹಾಗೂ ಕೆವಿಜಿ ಐಪಿಎಸ್‌ನಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದ ಹೇಮಲತಾ ದಂಪತಿಯ ಪುತ್ರ. ಬಿಜೆಪಿಯ ಪೂರ್ಣಾವಧಿ ಪ್ರಚಾರಕರಾಗಿ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯರಾದ ಅವರು, ಕೊಪ್ಪಳದಿಂದ ತಮ್ಮ ಕಾರ್ಯಚಟುವಟಿಕೆ ಆರಂಭಿಸಿದರು. ನಂತರ ಬೆಂಗಳೂರು ಹಾಗೂ ಪಾಂಡಿಚೇರಿಯಲ್ಲಿ ಪಕ್ಷದ ಸಂಘಟನಾ ಜವಾಬ್ದಾರಿಗಳನ್ನು ನಿರ್ವಹಿಸಿದರು.

. . . . . . .

ಬೆಂಗಳೂರು ಮಹಾನಗರದಲ್ಲಿ ಕಳೆದ ಎಂಟು ವರ್ಷಗಳಿಂದ ಸಂಘಟನಾ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ಅವರು, ಇದೀಗ ತೆಲಂಗಾಣ ರಾಜ್ಯದಲ್ಲಿ ಪಕ್ಷದ ಸಹ ಸಂಘಟನಾ ಕಾರ್ಯದರ್ಶಿಯಾಗಿ ಹೊಸ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ನೇಮಕಾತಿಗೆ ಸಂಬಂಧಿಸಿದಂತೆ ಆದೇಶ ಹೊರಡಿಸಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading