ದುಗ್ಗಲಡ್ಕ ಪ್ರೌಢಶಾಲಾ ಮೈದಾನದಲ್ಲಿ ಅ. 1 ಮತ್ತು 2ರಂದು ತಾಲೂಕು ಮಟ್ಟದ ಕ್ರೀಡಾಕೂಟ

ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ತಾಲೂಕು ಮಟ್ಟದ ಕ್ರೀಡಾಕೂಟ ಸಮಿತಿ ಹಾಗೂ ದುಗ್ಗಲಡ್ಕ ಸರಕಾರಿ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ 2026-27ನೇ ಸಾಲಿನ 14 ಮತ್ತು 17ರ ವಯೋಮಾನದ ಬಾಲಕ-ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟ ಅಕ್ಟೋಬರ್ 1 ಮತ್ತು 2ರಂದು ನಡೆಯಲಿದೆ.

. . . . . . . . .

ಗುರುವಾರ ಮತ್ತು ಶುಕ್ರವಾರ ಎರಡು ದಿನಗಳ ಕಾಲ ದುಗ್ಗಲಡ್ಕ ಸರಕಾರಿ ಪ್ರೌಢಶಾಲಾ ಮೈದಾನದಲ್ಲಿ ಈ ಕ್ರೀಡಾಕೂಟ ಜರುಗಲಿದೆ.
ತಾಲೂಕು ಮಟ್ಟದ ಕ್ರೀಡಾಕೂಟ ಸಂಘಟನಾ ಸಮಿತಿ ಮತ್ತು ಉಪಸಮಿತಿಗಳು, ದುಗ್ಗಲಡ್ಕ ಸರಕಾರಿ ಪ್ರೌಢಶಾಲೆಯ ಎಸ್‌ಡಿಎಂಸಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಸಿಬ್ಬಂದಿಗಳು, ವಿದ್ಯಾರ್ಥಿಗಳು, ಪೋಷಕ ವೃಂದ, ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳು, ಶಿಕ್ಷಣ ಇಲಾಖೆಯ ಅಧಿಕಾರಿ ವರ್ಗ ಮತ್ತು ಸಿಬ್ಬಂದಿ ವರ್ಗದವರು ಕ್ರೀಡಾಕೂಟದ ಯಶಸ್ಸಿಗೆ ಸಹಕರಿಸಲಿದ್ದಾರೆ.

. . . . . . .


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading