ವಾರ್ಷಿಕ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಸಾಧನೆಗಾಗಿ ಗುತ್ತಿಗಾರು ಪ.ಪೂ ಕಾಲೇಜಿಗೆ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಸನ್ಮಾನ – ಸತತ ಎರಡನೇ ಬಾರಿಗೆ ಶೇ.100 ಫಲಿತಾಂಶ ದಾಖಲೆ

2025-26 ಶೈಕ್ಷಣಿಕ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಕಲಾ ಹಾಗೂ ವಾಣಿಜ್ಯ ವಿಭಾಗದಲ್ಲಿ ಶೇ.100 ಫಲಿತಾಂಶ ಸಾಧನೆಗಾಗಿ ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ(ರಿ.) ಮಂಗಳೂರು, ಎಸ್.ಡಿ.ಎಂ ಪದವಿ ಪೂರ್ವ ಕಾಲೇಜು, ಉಜಿರೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ-2026 ರಂದು ಇಂದ್ರಪ್ರಸ್ಥ ಆಡಿಟೋರಿಯಂ, ಉಜಿರೆ ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಶೇ.100 ಫಲಿತಾಂಶಕ್ಕಾಗಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಪ್ರಾಂಶುಪಾಲರು ಹಾಗೂ ಉಪನ್ಯಾಸಕರನ್ನು ಸಮ್ಮಾನಿಸಲಾಯಿತು. ಗುತ್ತಿಗಾರು ಪದವಿ ಪೂರ್ವ ಕಾಲೇಜು ಸತತ ಎರಡನೇ ಬಾರಿಗೆ ಶೇ.100 ಫಲಿತಾಂಶ ಪಡೆದುಕೊಂಡಿದ್ದು, ಶೈಕ್ಷಣಿಕ ಸಾಧನೆಯ ಜೊತೆಗೆ ಕ್ರೀಡಾ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ತನ್ನದೇ ಸಾಧನೆಗಳನ್ನು ಮಾಡುತ್ತಿದ್ದು, ಕಾಲೇಜಿನ ಈ ಎಲ್ಲಾ ಸಾಧನೆಗಳನ್ನು ಗುರುತಿಸಿ ಮಾಡಿದ ಈ ಸನ್ಮಾನವನ್ನು ಕಾಲೇಜು ಪ್ರಾಂಶುಪಾಲರಾದ ಚೆನ್ನಮ್ಮ.ಪಿ, ರಾಜ್ಯಶಾಸ್ತ್ರ ಉಪನ್ಯಾಸಕ ರಂಜಿತ್ ಅಂಬೆಕಲ್ಲು, ಕನ್ನಡ ಉಪನ್ಯಾಸಕರಾದ ಸವಿತಾ ಕುಮಾರಿ, ಇತಿಹಾಸ ಉಪನ್ಯಾಸಕರಾದ ಪ್ರೀತಿ.ಪಿ ರೈ, ವಾಣಿಜ್ಯ ಶಾಸ್ತ್ರ ಉಪನ್ಯಾಸರಾದ ದೀಪ್ತಿ.ಐ.ಪಿ ಹಾಗೂ ದೀಕ್ಷಾ.ಯಂ.ಬಿ, ಇಂಗ್ಲಿಷ್ ಉಪನ್ಯಾಸಕರಾದ ದಿವ್ಯ.ಎ, ಸಮಾಜ ವಿಜ್ಞಾನ ಉಪನ್ಯಾಸಕರಾದ ಗ್ರಾಯತ್ರಿ.ಕೆ ಇವರು ಗೌರವ ಸ್ವೀಕರಿಸಿದರು.

. . . . . . . . .

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading