ಹಾಲೆಮಜಲು : ಆದರ್ಶ ಯೂತ್ ಕ್ಲಬ್ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಹಾಲೆಮಜಲು, ಅ. 2: ಆದರ್ಶ ಯೂತ್ ಕ್ಲಬ್ (ರಿ.) ಹಾಲೆಮಜಲು ಇದರ ವತಿಯಿಂದ ಗಾಂಧಿ ಜಯಂತಿ ಅಂಗವಾಗಿ ಅ. 2ರಂದು ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

. . . . . . . . .

ಕಾರ್ಯಕ್ರಮದ ಅಂಗವಾಗಿ ಹಾಲೆಮಜಲು ಬಸ್ ನಿಲ್ದಾಣದ ಸುತ್ತಮುತ್ತ ಹಾಗೂ ಸುಳ್ಯ–ಸುಬ್ರಹ್ಮಣ್ಯ ರಸ್ತೆಯ ಇಕ್ಕೆಲಗಳಲ್ಲಿ ಬೆಳೆದಿದ್ದ ಕಳೆಗಿಡಗಳನ್ನು ಕಡಿದು ಸ್ವಚ್ಛಗೊಳಿಸಲಾಯಿತು. ಅಲ್ಲದೆ, ಹಾಲೆಮಜಲು ಪರಿಸರದಲ್ಲಿ ಕಂಡುಬಂದ ಪ್ಲಾಸ್ಟಿಕ್ ಹಾಗೂ ಇನ್ನಿತರ ತ್ಯಾಜ್ಯಗಳನ್ನು ಸಂಗ್ರಹಿಸಿ ವಿಲೇವಾರಿಗೆ ವ್ಯವಸ್ಥೆ ಮಾಡಲಾಯಿತು.

. . . . . . .

ಸ್ವಚ್ಛತಾ ಕಾರ್ಯಕ್ರಮದಲ್ಲಿ ಆದರ್ಶ ಯೂತ್ ಕ್ಲಬ್‌ನ ಸದಸ್ಯರು ಸಕ್ರಿಯವಾಗಿ ಭಾಗವಹಿಸಿ ಸಹಕರಿಸಿದರು.

ಈ ಸಂದರ್ಭದಲ್ಲಿ ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷ ದಯಾನಂದ ಪಾತಿಕಲ್ಲು, ಪ್ರಧಾನ ಕಾರ್ಯದರ್ಶಿ ವಿಜೇಶ್ ಹಿರಿಯಡ್ಕ, ಗೌರವಾಧ್ಯಕ್ಷ ಪವನ್ ಪಲ್ಲತ್ತಡ್ಕ, ಕೋಶಾಧಿಕಾರಿ ವಿನಯ್ ಬೆದ್ರುಪಣೆ ಹಾಗೂ ನಿರ್ದೇಶಕ ಲೋಹಿತ್ ಬಾಳಿಕಳ ಅವರು ಭೇಟಿ ನೀಡಿ ಕಾರ್ಯಕ್ರಮಕ್ಕೆ ಪ್ರೋತ್ಸಾಹ ನೀಡಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading