ಶಿಕ್ಷಕಿ , ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ

ಬೆಳಕು ಸಾಹಿತ್ಯ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ವಿವಿಧ ಕ್ಷೇತ್ರಗಳ ಸಾಧಕರಿಗೆ ಕೊಡಮಾಡುವ ಪುರಸ್ಕಾರಕ್ಕೆ ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ಆಯ್ಕೆಯಾಗಿದ್ದು, ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.

. . . . . . . . .

ಅಕ್ಟೋಬರ್ 29 ರಂದು ಬೆಂಗಳೂರಿನ ಚಾಮರಾಜಪೇಟೆಯ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆದ ಬೆಳಕು ಸಂಸ್ಥೆಯ 126 ನೇ ಚಿಗುರು ಕಾರ್ಯಕ್ರಮದಲ್ಲಿ ಮೋಹಿತಾ ರಿಗೆ ರಾಷ್ಟ್ರಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

. . . . . . .

ರಾಜ್ಯದ ವಿವಿಧ ಜಿಲ್ಲೆಗಳು ಸಹಿತ ಹೊರ ರಾಜ್ಯದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬೆಳಕು ಸಂಸ್ಥೆ, ನಿರಂತರವಾಗಿ 125 ಕಾರ್ಯಕ್ರಮಗಳನ್ನು ನಡೆಸಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಗುರುತಿಸಿ ಗೌರವಿಸಿದೆ.

ಶಾಲಾ ಶಿಕ್ಷಕಿಯಾಗಿ ಮಕ್ಕಳಿಗೆ ಬೋಧಿಸುವುದರೊಂದಿಗೆ, ಹವ್ಯಾಸದಂತೆ ಕಳೆದ ಹಲವು ಸಮಯಗಳಿಂದ ಕನ್ನಡ ಸಾಹಿತ್ಯ ಲೋಕದಲ್ಲಿ ತನ್ನದೇ ಆದ ಚಾಪನ್ನು ಮೂಡಿಸಿ, ಪುತ್ತೂರಿನ ಚಿಗುರೆಲೆ ಸಾಹಿತ್ಯ ಬಳಗದಲ್ಲಿ ಸದಸ್ಯೆಯಾಗಿ ಹಲವಾರು ಕವನಗಳನ್ನು ಕನ್ನಡ ಸಾಹಿತ್ಯ ಲೋಕಕ್ಕೆ ಪರಿಚಯಿಸಿದ ಮೋಹಿತಾ ಹೊಸ್ಮಠರವರ ಚೊಚ್ಚಲ ಕವನ ಸಂಕಲನ ‘ಹಿತ ಸ್ವಪ್ನ’ ವು ಇತ್ತೀಚಿಗೆ ನಡೆದ ಕಡಬ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಿಡುಗಡೆಗೊಂಡಿತ್ತು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹಾಸನ ಜಿಲ್ಲಾಧ್ಯಕ್ಷ ಹಾಗೂ ಬೆಳಕು ಸಂಸ್ಥೆಯ 126 ನೇ ಚಿಗುರು ಸಮ್ಮೇಳನದ ಅಧ್ಯಕ್ಷ ಬಿ.ಪಿ ಕೃಷ್ಣೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಥಾಪಕ ಅಧ್ಯಕ್ಷ ಅಣ್ಣಪ್ಪ ಮೇಟಿಗೌಡ,ಕನ್ನಡ ಪರ ಚಿಂತಕ ಪಾಲನೇತ್ರ,ಇಂದು ಸಂಜೆ ಪತ್ರಿಕೆಯ ಸಂಪಾದಕ ಡಾ. ಜಿ ವೈ ಪದ್ಮನಾಗರಾಜ್,ಚಿತ್ರನಟರಾದ ಅಭಿಜಿತ್,ಅಂಕುಶ್ ಏಕಲವ್ಯ, ಬೆಂಗಳೂರಿನ ಶೈಕ್ಷಣಿಕ ಸಾಧಕಿ ಹಾಗೂ ಸಮಾಜ ಸೇವಕಿ ಡಾ. ರೂಪಾ ದೇವರಾಜ್ ಮತ್ತಿತರ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading