ಸುಳ್ಯ ನಗರ ವರ್ತುಲ ರಸ್ತೆ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನಕ್ಕೆ ಮನವಿ

ಸುಳ್ಯ: ನಗರೋತ್ಥಾನ ಯೋಜನೆಯಡಿ ಸುಳ್ಯ ನಗರದ ವರ್ತುಲ (ರಿಂಗ್) ರಸ್ತೆಗಳನ್ನು ಅಭಿವೃದ್ಧಿಪಡಿಸಲು ₹5 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಫರೀದ್ ಅವರಿಗೆ ಸುಳ್ಯ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ (ಸೂಡ) ಅಧ್ಯಕ್ಷ ಕೆ.ಎಂ. ಮುಸ್ತಫ ಮನವಿ ಸಲ್ಲಿಸಿದರು.

. . . . . . . . .

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಫರೀದ್ ಅವರು ಸುಳ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕೆ.ಎಂ. ಮುಸ್ತಫ ಅವರು ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

. . . . . . .

ಸುಳ್ಯ ನಗರವು ಶೈಕ್ಷಣಿಕ ನಗರಿಯಾಗಿ ಗುರುತಿಸಿಕೊಂಡಿದ್ದು, ದೇಶ-ವಿದೇಶಗಳ ಸಾವಿರಾರು ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಸುಳ್ಯ ನಗರವು ಕೇರಳ ರಾಜ್ಯ ಹಾಗೂ ಪ್ರವಾಸಿ ತಾಣವಾಗಿರುವ ಕೊಡಗು ಜಿಲ್ಲೆಯ ಗಡಿ ಪ್ರದೇಶವಾಗಿರುವುದರಿಂದ ದಿನದಿಂದ ದಿನಕ್ಕೆ ವಾಹನ ಸಂಚಾರ ಹೆಚ್ಚಾಗುತ್ತಿದ್ದು, ತೀವ್ರ ಟ್ರಾಫಿಕ್ ಸಮಸ್ಯೆ ಎದುರಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ಸಮಸ್ಯೆ ಇನ್ನಷ್ಟು ಬಿಗಡಾಯಿಸುವ ಸಾಧ್ಯತೆ ಇದೆ ಎಂದು ಅವರು ಸಚಿವರ ಗಮನಕ್ಕೆ ತಂದರು.

ಇದಕ್ಕೆ ಪರಿಹಾರವಾಗಿ ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ಮುಖ್ಯ ರಸ್ತೆಗಳನ್ನು ಸಂಪರ್ಕಿಸುವುದರ ಜೊತೆಗೆ, ನಗರ ವ್ಯಾಪ್ತಿಯಲ್ಲಿರುವ ಒಳರಸ್ತೆಗಳನ್ನು ವರ್ತುಲ ರಸ್ತೆಗಳಾಗಿ ಅಭಿವೃದ್ಧಿಪಡಿಸುವ ಅಗತ್ಯವಿದೆ. ಕೆಲವು ವರ್ತುಲ ರಸ್ತೆಗಳನ್ನು ನಿರ್ಮಿಸಲು ಖಾಸಗಿ ಭೂಮಾಲೀಕರು ಭೂಮಿ ಬಿಟ್ಟುಕೊಡಲು ಸಿದ್ಧರಿದ್ದು, ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ರಸ್ತೆ ಅಭಿವೃದ್ಧಿಪಡಿಸಲು ಅನುದಾನದ ಅಗತ್ಯವಿದೆ. ಆದ್ದರಿಂದ ನಗರೋತ್ಥಾನ ಯೋಜನೆಯಡಿ ₹5 ಕೋಟಿ ವಿಶೇಷ ಅನುದಾನ ಬಿಡುಗಡೆಗೊಳಿಸುವಂತೆ ಸಚಿವರಲ್ಲಿ ಕೆ.ಎಂ. ಮುಸ್ತಫ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷರಾದ ಎಂ. ವೆಂಕಪ್ಪ ಗೌಡ, ಎಸ್. ಸಂಶುದ್ದೀನ್, ಶಾಫಿ ಕುತ್ತಮೊಟ್ಟೆ, ರಾಜು ಪಂಡಿತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading