ಅ.8 : ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಹಾಗೂ ಪೋಷಣ್ ಮಾಸಾಚರಣೆ

ಬೆಳ್ಳಾರೆ, ಅ. 8: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಳ್ಳಾರೆ ಗ್ರಾಮ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ ಬೆಳ್ಳಾರೆ ವಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ, ಶ್ರೀ ಧನಲಕ್ಷ್ಮೀ ಸ್ತ್ರೀ ಶಕ್ತಿ ಗೊಂಚಲು ಸಮಿತಿ ಬೆಳ್ಳಾರೆ, ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಹಾಗೂ ಸ್ನೇಹಿತರ ಕಲಾ ಸಂಘ (ರಿ.) ಬೆಳ್ಳಾರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ, ರಾಷ್ಟ್ರೀಯ ಪೋಷಣ್ ಮಾಸಾಚರಣೆ ಹಾಗೂ ಆರೋಗ್ಯ ಮಾಹಿತಿ ಕಾರ್ಯಕ್ರಮ ಅ. 8ರಂದು ಬೆಳಿಗ್ಗೆ 10 ಗಂಟೆಗೆ ಬೆಳ್ಳಾರೆ ರಾಜೀವ್ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಲಿದೆ.

. . . . . . . . .

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ಳಾರೆ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಎಂ. ಎಂ. ಫಯಾಝ್ ಅಹ್ಮದ್ ವಹಿಸಲಿದ್ದು, ಉದ್ಘಾಟನೆಯನ್ನು ಸುಳ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಶೈಲಜಾ ಬಿ. ನೆರವೇರಿಸಲಿದ್ದಾರೆ. ಸಂಪನ್ಮೂಲ ವ್ಯಕ್ತಿಯಾಗಿ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕಿರಣ್ ಯು. ಭಾಗವಹಿಸಲಿದ್ದಾರೆ.

. . . . . . .

ಗೌರವ ಉಪಸ್ಥಿತರಾಗಿ ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷ ಮುಹಮ್ಮದ್ ಆರೀಫ್, ಬೆಳ್ಳಾರೆ ಸ್ನೇಹಿತರ ಕಲಾ ಸಂಘ (ರಿ.) ಅಧ್ಯಕ್ಷ ಶ್ರೀನಿವಾಸ ನಾಯ್ಕ, ಬೆಳ್ಳಾರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ಸಿ.ವಿ., ಬೆಳ್ಳಾರೆ ವಲಯ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಅಧ್ಯಕ್ಷೆ ಶ್ರೀಮತಿ ಉಷಾ ಪ್ರಸಾದ್ ರೈ ಹಾಗೂ ಬೆಳ್ಳಾರೆ ಶ್ರೀ ಧನಲಕ್ಷ್ಮೀ ಸ್ತ್ರೀ ಶಕ್ತಿ ಗೊಂಚಲು ಸಮಿತಿ ಅಧ್ಯಕ್ಷೆ ಶ್ರೀಮತಿ ದೇವಕಿ ಭಾಗವಹಿಸಲಿದ್ದಾರೆ.

ವರದಿ: ಎಂ. ಎ. ಮುಸ್ತಫಾ, ಬೆಳ್ಳಾರೆ


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading