ಹರಿಹರ ಪಳ್ಳತ್ತಡ್ಕ : “ಜೇನು ಕೃಷಿ ತರಬೇತಿ” ಕಾರ್ಯಕ್ರಮ

ಸುಳ್ಯ ತೋಟಗಾರಿಕಾ ಇಲಾಖೆಯ ವತಿಯಿಂದ ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಹಯೋಗದೊಂದಿಗೆ ಅ.08ರಂದು ಸಂಘದ ಪ್ರಧಾನ ಕಛೇರಿಯಲ್ಲಿ “ಜೇನು ಕೃಷಿ ತರಬೇತಿ ಕಾರ್ಯಕ್ರಮ”ವು ಉದ್ಘಾಟನೆಗೊಂಡಿತು. ನಿವೃತ್ತ ಪ್ರಾಂಶುಪಾಲರು ಹಾಗೂ ಪ್ರಗತಿಪರ ಕೃಷಿಕರಾದ ಪ್ರಭಾಕರ ಕಿರಿಭಾಗ ರವರು ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಘದ ಅಧ್ಯಕ್ಷರಾದ ಡಾ. ಸೋಮಶೇಖರ್ ಕಟ್ಟೆಮನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸುಳ್ಯ ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಪ್ರಮೋದ್ ಸಿ.ಎಂ, ಸಂಪನ್ಮೂಲ ವ್ಯಕ್ತಿಗಳಾದ ಅಜೇಯ ಪೊಯ್ಯೆಮಜಲು, ವಿವೇಕ್ ಪಡ್ಪು, ಕೀರ್ತನ್ ಪೈಲಾರು, ಸಂಘದ ಉಪಾಧ್ಯಕ್ಷರಾದ ಗಣೇಶ್ ಭಟ್ ಇಡ್ಯಡ್ಕ, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀಮತಿ ತೀರ್ಥ ಕುಮಾರಿ ವೈ ಹಾಗೂ ಹಿರಿಯ ತೋಟಗಾರಿಕಾ ಅಧಿಕಾರಿಗಳಾದ ಡಾ. ವಿಜೇತ್ ಉಪಸ್ಥಿತರಿದ್ದರು. ಗಣೇಶ್ ಭಟ್ ಸ್ವಾಗತಿಸಿ, ಡಾ. ವಿಜೇತ್ ಧನ್ಯವಾದ ಸಮರ್ಪಿಸಿದರು. ಗೌರೀಶ್ ಮಲ್ಲಾಜೆ ಕಾರ್ಯಕ್ರಮ ನಿರೂಪಿಸಿದರು. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading