ಎನ್.ಎಂ.ಸಿ : ಬಿ.ಸಿ.ಎ. ವಿಭಾಗದ ‘ಟೆಕ್ ಕೆಡೆಟ್ಸ್’ ಘಟಕದ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ

ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನ ಬಿ.ಸಿ.ಎ ವಿಭಾಗದ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ‘ಟೆಕ್ ಕೆಡೆಟ್ಸ್’ ಘಟಕದ ವಾರ್ಷಿಕ ಚಟುವಟಿಕೆಗಳಿಗೆ ಅಕ್ಟೋಬರ್ 06ರಂದು ಚಾಲನೆ ನೀಡಲಾಯಿತು.

. . . . . . . . .

ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಘಟಕದ ಲೋಗೋವನ್ನು ವಿಡಿಯೋ ಮೂಲಕ ಅನಾವರಣಗೊಳಿಸಿ, ವಾರ್ಷಿಕ ಚಟುವಟಿಕೆಗಳಿಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು.

. . . . . . .

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು ಹಾಗೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ. ಅವರು ಮಾತನಾಡಿ, ಬಿ.ಸಿ.ಎ. ವಿಭಾಗದ ವತಿಯಿಂದ ಆಯೋಜಿಸಲಾಗುವ ವಾರ್ಷಿಕ ಚಟುವಟಿಕೆಗಳಿಗೆ ಶುಭ ಹಾರೈಸಿದರು.

ವೇದಿಕೆಯಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀಧರ್ ವಿ. ಹಾಗೂ ಐಕ್ಯೂಎಸಿ ಸಂಯೋಜಕರಾದ ಡಾ. ಮಮತಾ ಕೆ. ಉಪಸ್ಥಿತರಿದ್ದರು. ಬಿ.ಸಿ.ಎ. ವಿಭಾಗದ ಮುಖ್ಯಸ್ಥೆ ದೀಕ್ಷಾ ಎಂ.ಡಿ. ಅವರು ‘ಟೆಕ್ ಕೆಡೆಟ್ಸ್’ ಘಟಕದ ಉದ್ದೇಶ ಹಾಗೂ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.

ತೃತೀಯ ಬಿ.ಸಿ.ಎ. ವಿದ್ಯಾರ್ಥಿ ಸೂರ್ಯ ಸ್ವಾಗತಿಸಿ, ಕು. ಯಶಿತಾ ಕಾರ್ಯಕ್ರಮ ನಿರೂಪಿಸಿದರು. ಆಯಿಷತುಲ್ಲಾ ರಿದಾ ಫಾತಿಮಾ ವಂದಿಸಿದರು. ಬಿ.ಸಿ.ಎ. ವಿಭಾಗದ ಉಪನ್ಯಾಸಕರಾದ ರಕ್ಷಾ ಎಂ., ಸಿಂಧು, ನಿಶ್ಮಿ ರೈ ಎನ್., ಕೃಪಾ ಎ. ಹಾಗೂ ಶಿಲ್ಪಾ ರೈ ಎಂ. ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ಬಳಿಕ ಮಂಗಳೂರಿನ ಕೋಡ್ ಲ್ಯಾಬ್ ಸಿಸ್ಟಮ್ಸ್‌ನ ಹಿರಿಯ ಡೆವಲಪರ್ ರಾಜ್ ಸ್ವಾಸ್ತಿಕ್ ಹಾಗೂ ಹಿರಿಯ ಸಾಫ್ಟ್‌ವೇರ್ ಡೆವಲಪರ್ ಮೊಹಮ್ಮದ್ ಜಝೀಲ್ ಅವರು “ತಂತ್ರಜ್ಞಾನದಲ್ಲಿನ ಉದಯೋನ್ಮುಖ ಪ್ರವೃತ್ತಿಗಳು “Emerging Trends in Technology” ಎಂಬ ವಿಷಯದ ಕುರಿತು ವಿಚಾರ ಸಂಕಿರಣ ನಡೆಸಿಕೊಟ್ಟರು. ವಿದ್ಯಾರ್ಥಿಗಳಿಗೆ ಪ್ರಸ್ತುತ ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆಗಳು ಹಾಗೂ ಹೊಸ ತಾಂತ್ರಿಕ ಪ್ರವೃತ್ತಿಗಳ ಕುರಿತು ಮಾಹಿತಿ ನೀಡಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading