ಎನ್‌ಎಂಸಿ ವಿದ್ಯಾರ್ಥಿ ಸಂಘ ಉದ್ಘಾಟನೆ, ವಿದ್ಯಾರ್ಥಿವೇತನ ವಿತರಣೆ

ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ವಿದ್ಯಾರ್ಥಿವೇತನ ವಿತರಣಾ ಸಮಾರಂಭವು ಅ. 8ರಂದು ಕಾಲೇಜಿನ ಮುಖ್ಯ ಸಭಾಭವನದಲ್ಲಿ ನಡೆಯಿತು.

. . . . . . . . .

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ. ಅವರ ಉಪಸ್ಥಿತಿಯಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.), ಸುಳ್ಯದ ಕಾರ್ಯದರ್ಶಿ ಕೆ.ವಿ. ಹೇಮನಾಥ್ ಅವರು ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು ಸವಾಲಾಗಿ ಸ್ವೀಕರಿಸಿ, ಅವುಗಳನ್ನು ಅವಕಾಶಗಳನ್ನಾಗಿ ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು.

. . . . . . .

ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀಧರ ವಿ. ಅವರು ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳಾದ ಅಭಿನಂದನ್ ಬಿ.ಎಸ್., ಕ್ಷಿತಿಜ್ ಪಿ., ನಜ್ಮ ಎಸ್., ಸಾಗರ್ ಬಿ.ಎಂ., ಗೌರವ್ ನಿಡ್ಯಮಲೆ, ಅನ್ವಿತಾ ಆರ್. ಭಟ್, ಅಭಿಷೇಕ್ ಎಂ., ಸಂಜನಾ ಜೆ.ಎಸ್., ಪ್ರತೀಕ್ಷಾ ಎಂ., ಅಂಬಿಕಾ ಎಂ.ಬಿ., ಅಕ್ಷತ್ ಎ.ಎಲ್. ಹಾಗೂ ಯುಕ್ತಿ ಕೆ.ಎಂ. ಅವರಿಗೆ ಪ್ರಮಾಣವಚನ ಬೋಧಿಸಿದರು. ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

ವೇದಿಕೆಯಲ್ಲಿ ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷೆ ಶಶ್ಮಿ ಭಟ್ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಯೋಜಕಿ ಡಾ. ಮಮತಾ ಕೆ. ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ನೀಡಲಾಗುವ ವಿದ್ಯಾರ್ಥಿವೇತನವನ್ನು ವಿತರಿಸಲಾಯಿತು. ಕಾಲೇಜಿನ ಸುವರ್ಣ ಸಂಭ್ರಮದ ಅಂಗವಾಗಿ ಆಯೋಜಿಸಲಾಗಿದ್ದ ಕೆಸರುಗದ್ದೆ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರಿಗೆ ಬಹುಮಾನ ನೀಡಲಾಯಿತು. ಓಣಂ ಹಬ್ಬದ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಗಳ ವಿಜೇತರಿಗೂ ಬಹುಮಾನ ವಿತರಿಸಲಾಯಿತು.

ಪ್ರಥಮ ಬಿ.ಕಾಂ. ವಿದ್ಯಾರ್ಥಿಗಳಾದ ಸುಮಿತ್ ಜೆ. ಮತ್ತು ಗಿತೇಶ್ ಕೆ.ಪಿ. ಪ್ರಾರ್ಥಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಭಿನಂದನ್ ಸ್ವಾಗತಿಸಿದರು. ಉಪಾಧ್ಯಕ್ಷೆ ನಜ್ಮ ವಂದಿಸಿದರು. ದ್ವಿತೀಯ ಬಿ.ಎಸ್ಸಿ. ವಿದ್ಯಾರ್ಥಿನಿ ಪ್ರತೀಕ್ಷಾ ಬಿ. ಕಾರ್ಯಕ್ರಮ ನಿರೂಪಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading