“ಮಂಗಳೂರಿನ ಸೈಂಟ್ ಆಗ್ನೇಸ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಕ್ರಮ ಖಂಡನೀಯ, ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗಳಿಗೆ ಸ್ಪಂದಿಸಿ” : ಶ್ರೀಕಾಂತ್ ಮಾವಿನಕಟ್ಟೆ

“ಮಂಗಳೂರಿನ ಸೇಂಟ್ ಆಗ್ನೆಸ್ ಕಾಲೇಜಿನಲ್ಲಿ ದಸರಾ ಹಬ್ಬದ ಸಂದರ್ಭದಲ್ಲಿ ಪರೀಕ್ಷೆಗಳನ್ನು ನಡೆಸುವುದಕ್ಕೆ ವಿರೋಧ ವ್ಯಕ್ತಪಡಿಸಿ ವಿದ್ಯಾರ್ಥಿಗಳು ತಮ್ಮ ಬೇಡಿಕೆಗಳನ್ನು ಮುಂದಿಟ್ಟಿರುವುದು ಅವರ ಹಬ್ಬದ ಸಂಭ್ರಮ ಮತ್ತು ಹಕ್ಕುಗಳಿಗೆ ಸಂಬಂಧಿಸಿದ ವಿಚಾರವಾಗಿದೆ. ಇಂತಹ ಸಂದರ್ಭದಲ್ಲಿ ಪರೀಕ್ಷೆಗಳನ್ನು ನಿಗದಿಪಡಿಸಿದರೆ ವಿದ್ಯಾರ್ಥಿಗಳು ಹಬ್ಬವನ್ನು ಹೇಗೆ ಸಂಭ್ರಮಿಸಲು ಸಾಧ್ಯ” ಎಂದು ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಸುಳ್ಯ ಮಂಡಲದ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ ಪ್ರಶ್ನಿಸಿದ್ದಾರೆ.

. . . . . . . . .

“ವಿದ್ಯಾರ್ಥಿಗಳ ಅಹವಾಲುಗಳನ್ನು ಆಲಿಸಿ, ಅವರೊಂದಿಗೆ ಚರ್ಚೆ ನಡೆಸುವ ಮೂಲಕ ಸಮಸ್ಯೆಯನ್ನು ಬಗೆಹರಿಸಬೇಕಾದ ಜವಾಬ್ದಾರಿ ಶಿಕ್ಷಣ ವ್ಯವಸ್ಥೆಯ ಮೇಲಿದೆ. ಆದರೆ, ಸಮಸ್ಯೆಯನ್ನು ಮಾತುಕತೆಯ ಮೂಲಕ ಪರಿಹರಿಸುವ ಬದಲು ವಿದ್ಯಾರ್ಥಿಗಳ ಮೇಲೆ ಪೊಲೀಸ್ ಕ್ರಮ ಕೈಗೊಳ್ಳುವುದು ಖಂಡನೀಯ” ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

. . . . . . .

“ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗಳಿಗೆ ಸ್ಪಂದಿಸಿ, ಅವರ ಹಕ್ಕುಗಳಿಗೆ ಗೌರವ ನೀಡಬೇಕು. ವಿದ್ಯಾರ್ಥಿಗಳ ವಿರುದ್ಧ ದಮನಕಾರಿ ಕ್ರಮಗಳನ್ನು ಕೈಬಿಟ್ಟು, ಅವರ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಬಗೆಹರಿಸಲು ಸಂಬಂಧಪಟ್ಟವರು ಮುಂದಾಗಬೇಕು” ಎಂದು ಶ್ರೀಕಾಂತ್ ಮಾವಿನಕಟ್ಟೆ ಆಗ್ರಹಿಸಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading