ಪಂಜದಲ್ಲಿ ಅ.24ರಿಂದ ಮದ್ಯವರ್ಜನ ಶಿಬಿರ : ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

ಪಂಜ: ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಅಕ್ಟೋಬರ್ 24ರಿಂದ 31ರವರೆಗೆ ನಡೆಯಲಿರುವ ಮದ್ಯವರ್ಜನ ಶಿಬಿರದ ಪೂರ್ವಭಾವಿ ಸಭೆಯು ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾಭವನದಲ್ಲಿ ನಡೆಯಿತು.

. . . . . . . . .

ಮದ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಪದ್ಮನಾಭ ರೈ ಅಗೋಳಿಬೈಲುಗುತ್ತು ಸಭೆಯ ಅಧ್ಯಕ್ಷತೆ ವಹಿಸಿದ್ದರು.

. . . . . . .

ಸಭೆಯಲ್ಲಿ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರು, ಶಿಬಿರದ ಗೌರವಾಧ್ಯಕ್ಷ ಶ್ರೇಯಾಂಸ್ ಕುಮಾರ್ ಶೆಟ್ಟಿಮೂಲೆ, ಯೋಜನಾಧಿಕಾರಿ ಮಾಧವ ಗೌಡ, ಜನಜಾಗೃತಿ ವೇದಿಕೆ ಪಂಜ ವಲಯದ ಅಧ್ಯಕ್ಷ ಮೋನಪ್ಪ ಗೌಡ ಬೊಳ್ಳಾಜೆ, ಜನಜಾಗೃತಿ ವೇದಿಕೆಯ ಜಿಲ್ಲಾ ಸದಸ್ಯ ಶಿವಪ್ರಸಾದ್ ಮಾದನ ಮನೆ, ಕೋಅಪ್ಟ್ ಸದಸ್ಯ ಚಂದ್ರಶೇಖರ್ ಕಟ್ಟಿ, ಪ್ರಗತಿಬಂಧು–ಸ್ವಸಹಾಯ ಸಂಘಗಳ ಒಕ್ಕೂಟದ ಪಂಜ ವಲಯದ ಅಧ್ಯಕ್ಷ ಧರ್ಮಪಾಲ ಕನ್ನಲ್, ಭಜನಾ ಪರಿಷತ್ ವಲಯದ ಅಧ್ಯಕ್ಷ ಪ್ರಕಾಶ್ ನರಿಯಂಗ, ಒಕ್ಕೂಟದ ಅಧ್ಯಕ್ಷರಾದ ನಳಿನಿ, ವಾಸುದೇವ ಆನೆಮನೆ, ನಿರ್ಮಲ ಪಲ್ಲೋಡಿ, ವಿನೋದ್ ಬೊಳ್ಮಲೆ ಸೇರಿದಂತೆ ಒಕ್ಕೂಟಗಳ ಪದಾಧಿಕಾರಿಗಳು ಹಾಗೂ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಅಕ್ಟೋಬರ್ 24ರಿಂದ 31ರವರೆಗೆ ನಡೆಯಲಿರುವ ಮದ್ಯವರ್ಜನ ಶಿಬಿರದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading