ಎನ್ನೆಂಸಿ : ವಾರ್ಷಿಕ ಕ್ರೀಡೋತ್ಸವ 2026 ; ಸುವರ್ಣ ಸಂಭ್ರಮದ ವರ್ಷಕ್ಕೆ ವಿಶೇಷ ಮೆರುಗು

ಸುಳ್ಯ ಅ.13: ನೆಹರೂ ಮೆಮೋರಿಯಲ್ ಕಾಲೇಜಿನ ವಾರ್ಷಿಕ ಕ್ರೀಡಾಕೂಟವು ಅಕ್ಟೋಬರ್ 13 ಮಂಗಳವಾರದಂದು ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟವನ್ನು ಎನ್.ಎಂ.ಸಿ.ಯ ಹಿರಿಯ ವಿದ್ಯಾರ್ಥಿ ಕೆವಿಜಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇಲ್ಲಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ.ವಿ ಉದ್ಘಾಟಿಸಿ ಮಾತನಾಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹದ ನುಡಿಗಳನ್ನಾಡಿ ಕ್ರೀಡೋತ್ಸವಕ್ಕೆ ಶುಭಹಾರೈಸಿದರು. ನೆಹರೂ ಮೆಮೋರಿಯಲ್ ಕಾಲೇಜಿನ ಸುವರ್ಣ ಸಂಭ್ರಮ ವರ್ಷದ ವಾರ್ಷಿಕ ಕ್ರೀಡೋತ್ಸವದಲ್ಲಿ ಭಾಗವಹಿಸುವುದು ನಮ್ಮೆಲ್ಲರ ಅದೃಷ್ಟ, ಇಲ್ಲಿನ ಉತ್ಸಾಹಿ ಉಪನ್ಯಾಸಕರ ಮಾರ್ಗದರ್ಶನದಲ್ಲಿ ಎನ್ ಸಿ ಸಿ ಬ್ಯಾಂಡ್ ಜೊತೆಗಿನ ಆಕರ್ಷಕ ಪಥಸಂಚಲನದೊಂದಿಗೆ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಶಿಸ್ತಿನಿಂದ ಭಾಗವಹಿಸುತ್ತಿರುವುದರಿಂದ ಈ ಕಾರ್ಯಕ್ರಮವು ಸುಂದರವಾಗಿ ಆಯೋಜನೆಗೊಂಡಿದೆ ಎಂದು ಹೇಳಿದರು.

. . . . . . . . .

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರುದ್ರಕುಮಾರ್ ಎಂ.ಎಂ ಅಧ್ಯಕ್ಷತೆ ವಹಿಸಿದ ಸಭಾವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀಧರ್ ವಿ, ಕಾಲೇಜು ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಶಶ್ಮಿ ಭಟ್ ಉಪಸ್ಥಿತರಿದ್ದರು.

. . . . . . .

ಕಾಲೇಜಿನ ನ್ಯಾಕ್ ಸಂಯೋಜಕಿ ಡಾ. ಮಮತಾ ಕೆ ಸ್ವಾಗತಿಸಿ, ಕ್ರೀಡಾ ಕಾರ್ಯದರ್ಶಿ ಕು. ಅಂಬಿಕಾ ಪ್ರಮಾಣ ವಚನ ಬೋಧಿಸಿದರು. ಕಾಲೇಜಿನ ಸಂಸ್ಕೃತಿಕ ಕಾರ್ಯದರ್ಶಿ ಅಭಿಷೇಕ್ ಎಂ ಪ್ರಾರ್ಥಿಸಿ, ಕ್ರೀಡಾ ಜೊತೆ ಕಾರ್ಯದರ್ಶಿ ಅಕ್ಷತ್ ಕುಮಾರ್ ಎ ಧನ್ಯವಾದ ಸಮರ್ಪಿಸಿದರು. ಕಾಲೇಜಿನ ಆಂಗ್ಲಭಾಷಾ ವಿಭಾಗ ಮುಖ್ಯಸ್ಥೆ ಭವ್ಯಾ ರಜತ್ ಕಾರ್ಯಕ್ರಮ ನಿರೂಪಿಸಿದರು.

ಆಕರ್ಷಕ ಪಥಸಂಚಲನ ಮತ್ತು ವಿವಿಧ ಕ್ರೀಡಾ ಸ್ಪರ್ಧೆಗಳು ದೈಹಿಕ ಶಿಕ್ಷಕರಾದ ಕ್ಯಾಪ್ಟನ್ ಸೀತಾರಾಮ ಎಂ. ಡಿ ಮತ್ತು ಕಾಲೇಜಿನ ಉಪನ್ಯಾಸಕ ವೃಂದದವರ ನೇತೃತ್ವದಲ್ಲಿ ನಡೆಯಿತು. ಉಪಸ್ಥಿತ ಗಣ್ಯರಿಂದ ವಿಜೇತರಿಗೆ ವಿಜಯ ವೇದಿಕೆಯಲ್ಲಿ ಪ್ರಶಸ್ತಿ ವಿತರಿಸಲಾಯಿತು. ಕಾಲೇಜಿನ ಬೋಧಕ ಬೋಧಕೇತರ ವೃಂದದವರು, ವಿದ್ಯಾರ್ಥಿ ಸಂಘದ ಎಲ್ಲಾ ಪದಾಧಿಕಾರಿಗಳು ಸಹಕರಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading