ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಅಧೀಕ್ಷಕ ಶಿವಪ್ರಸಾದ್ ಜಿ.ಎಸ್. ಹೃದಯಾಘಾತದಿಂದ ನಿಧನ

ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಅಧೀಕ್ಷಕ ಶಿವಪ್ರಸಾದ್ ಜಿ.ಎಸ್. ರವರು ಹೃದಯಾಘಾತದಿಂದ ನಿಧನರಾಗಿರುವ ಘಟನೆ ವರದಿಯಾಗಿದೆ. ಅವರಿಗೆ 54 ವರ್ಷ ವಯಸ್ಸಾಗಿತ್ತು.

. . . . . . . . .

ಜ್ವರದಿಂದ ಬಳಲುತ್ತಿದ್ದ ಅವರಿಗೆ ಮುಂಜಾನೆ 2ರ ಸುಮಾರಿಗೆ ಎದೆನೋವು ಕಾಣಿಸಿತೆಂದು, ಮನೆಯವರು ಪುತ್ತೂರಿನ ಆಸ್ಪತ್ರೆಗೆ ಕರೆದುಕೊಂಡು ಬಂದರಾದರೂ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದರೆಂದು ತಿಳಿದುಬಂದಿದೆ.

. . . . . . .

ಸುಳ್ಯ ಉಬರಡ್ಕ ಹುಳಿಯಡ್ಕ ನಿವಾಸಿಯಾಗಿರುವ ಶಿವರಾಮರವರ ಪುತ್ರ ಶಿವ ಪ್ರಸಾದ್ ರವರು ಪ್ರಸ್ತುತ ಪುತ್ತೂರಿನ ನೆಹರೂನಗರ ಸಮೀಪ ಮನೆ ಮಾಡಿ ಪತ್ನಿ ಮಕ್ಕಳೊಂದಿಗೆ ನೆಲೆಸಿದ್ದಾರೆ.

ಸುಳ್ಯ ತಾಲೂಕು ಪಂಚಾಯತ್ ನಲ್ಲಿ ಅಕ್ಷರದಾಸೋಹ ಪ್ರಥಮ ದರ್ಜೆ ಸಹಾಯಕರಾಗಿ ಸೇವೆಗೆ ಸೇರಿದ್ದ ಅವರು, ಎರಡು ವರ್ಷಗಳ ಹಿಂದೆ ಪದೋನ್ನತಿ ಗೊಂಡು ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಬಂದಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading