ಯುವಕರಲ್ಲಿ ಪ್ರಜಾಪ್ರಭುತ್ವದ ಮೌಲ್ಯ ಬೆಳೆಸಲು ಯುವ ಸಂಸತ್ತು ಮಾದರಿ: ತಹಶೀಲ್ದಾರ್ ಮಂಜುಳಾ ಎಂ.

ಯುವಜನತೆಯಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು, ಸಂವಿಧಾನದ ಆಶಯಗಳು ಹಾಗೂ ಸಂಸದೀಯ ವ್ಯವಸ್ಥೆಯ ಕಾರ್ಯವೈಖರಿಯ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಯುವ ಸಂಸತ್ತು-2026 ಕಾರ್ಯಕ್ರಮ ಅ. 16ರಂದು ನೆಹರು ಮೆಮೋರಿಯಲ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

. . . . . . . . .

ಸುಳ್ಯ ತಾಲೂಕು ಆಡಳಿತ, ತಾಲೂಕು ಪಂಚಾಯತ್, ನಗರಸಭೆ, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

. . . . . . .

ತಹಶೀಲ್ದಾರ್ ಮಂಜುಳಾ ಎಂ. ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಪ್ರಕ್ರಿಯೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು. ಇಂದಿನ ಯುವಕರೇ ನಾಳಿನ ದೇಶದ ನಾಯಕರು. ಆದ್ದರಿಂದ ಸಂವಿಧಾನದ ಆಶಯಗಳನ್ನು ಅರಿತು, ಜವಾಬ್ದಾರಿಯುತ ನಾಗರಿಕರಾಗಿ ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಬೇಕು. ಯುವ ಸಂಸತ್ತು ವಿದ್ಯಾರ್ಥಿಗಳಿಗೆ ಸಂಸದೀಯ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ತಿಳಿದುಕೊಳ್ಳಲು ಉತ್ತಮ ವೇದಿಕೆಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪಿ.ಎಸ್. ಗಂಗಾಧರ, ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲ್, ಸುಳ್ಯ ತಾಲೂಕಿನ ಶಿಕ್ಷಣಾಧಿಕಾರಿ ವೈ.ಎಸ್. ಹರಗಿ, ನೆಹರು ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ.ಎಂ. ಹಾಗೂ ಕೆವಿಜಿ ಕಾನೂನು ಕಾಲೇಜಿನ ಪ್ರಾಂಶುಪಾಲೆ ಉಪಸ್ಥಿತರಿದ್ದರು.

ಯುವ ಸಂಸತ್ತು ಕಾರ್ಯಕ್ರಮದಲ್ಲಿ ಸುಮಾರು 14 ವಿದ್ಯಾರ್ಥಿಗಳನ್ನು ಒಳಗೊಂಡ ತಂಡಗಳು ಸಂಸದೀಯ ಕಲಾಪಗಳ ಮಾದರಿಯನ್ನು ಪ್ರಸ್ತುತಪಡಿಸಿದವು. ಸಂಸತ್ತಿನ ಕಾರ್ಯವಿಧಾನ, ಪ್ರಜಾಪ್ರಭುತ್ವದ ವ್ಯವಸ್ಥೆ ಹಾಗೂ ಸಂಸದೀಯ ಚರ್ಚೆಗಳ ಮಹತ್ವವನ್ನು ಪ್ರಾಯೋಗಿಕವಾಗಿ ಪರಿಚಯಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ರಾಜಕೀಯ ಮತ್ತು ಪ್ರಜಾಸತ್ತಾತ್ಮಕ ಅರಿವು ಮೂಡಿಸಲಾಯಿತು.

ಗುಡ್ಡಪ್ಪ ಬಲ್ಯ, ತನುಜಾ ಹಾಗೂ ಖ್ಯಾತ ವಕೀಲ ಸುಕುಮಾರ ಕೊಡ್ತುಗುಳಿ ತೀರ್ಪುಗಾರರಾಗಿ ಭಾಗವಹಿಸಿದ್ದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಮಮತಾ ಕೆ. ಕಾರ್ಯಕ್ರಮ ನಿರೂಪಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading