ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸುಳ್ಯ ತಾಲ್ಲೂಕು ಮಟ್ಟದ ಯುವಸಂಸತ್–2026 ಕಾರ್ಯಕ್ರಮ

ನೆಹರೂ ಮೆಮೋರಿಯಲ್ ಕಾಲೇಜು, ಸುಳ್ಯದಲ್ಲಿ ಸುಳ್ಯ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್, ಸುಳ್ಯ ನಗರಸಭೆ, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಗಳ ಸಹಯೋಗದಲ್ಲಿ ಸುಳ್ಯ ತಾಲ್ಲೂಕು ಮಟ್ಟದ ಯುವಸಂಸತ್–2026 ಕಾರ್ಯಕ್ರಮವು ಸೆ. 16ರಂದು ಕಾಲೇಜಿನ ಮುಖ್ಯ ಸಭಾಂಗಣದಲ್ಲಿ ನಡೆಯಿತು.

. . . . . . . . .

ಕಾರ್ಯಕ್ರಮವನ್ನು ಉದ್ಘಾಟಿಸಿದ ಸುಳ್ಯ ತಾಲ್ಲೂಕು ತಹಶೀಲ್ದಾರರಾದ ಶ್ರೀಮತಿ ಮಂಜುಳಾ ಅವರು ಮಾತನಾಡಿ, ಯುವಜನತೆ ದೇಶದ ಭವಿಷ್ಯದ ಶಕ್ತಿಯಾಗಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು.

. . . . . . .

ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ. ಎಂ., ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ವೈ ಎಸ್ ಹರಗಿ, ನೆಹರೂ ಮೆಮೋರಿಯಲ್ ಕಾಲೇಜಿನ ಆಡಳಿತ ಅಧಿಕಾರಿ ಚಂದ್ರಶೇಖರ ಪೇರಾಲು, ಕೆವಿಜಿ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಟೀನಾ ಹಾಗೂ ಸುಳ್ಯ ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಪಿ. ಎಸ್. ಗಂಗಾಧರ್ ಉಪಸ್ಥಿತರಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಸುಳ್ಯ ತಾಲ್ಲೂಕಿನ ಸಹಾಯಕ ನಿರ್ದೇಶಕರಾದ ಕೃಷ್ಣ ಬಿ. ಅವರು ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕ್ಷೇತ್ರ ಶಿಕ್ಷಣ ಇಲಾಖೆಯ ಶಿಕ್ಷಣ ಸಂಯೋಜಕರಾದ ನಾರಾಯಣರವರು ವಂದಿಸಿದರು. ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ನೋಡಲ್ ಅಧಿಕಾರಿಗಳಾದ ಡಾ. ಮಮತಾ ಕೆ. ಅವರು ಕಾರ್ಯಕ್ರಮವನ್ನು ನಿರೂಪಿಸಿ ನಿರ್ವಹಿಸಿದರು.

ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮುಸ್ತಫಾ ಅವರು ವಹಿಸಿ ಮಾತನಾಡಿ, ಈ ಸಂಸತ್ತು ವಿದ್ಯಾರ್ಥಿಗಳಿಗೆ ಸಂಸತ್ತಿನ ಕಾರ್ಯವೈಖರಿಯ ಕುರಿತು ಚರ್ಚಿಸಲು, ಸಂವಾದ ನಡೆಸಲು ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಮಂಡಿಸಲು ಉತ್ತಮ ವೇದಿಕೆಯಾಗಿದೆ ಎಂದು ಅಭಿಪ್ರಾಯಪಟ್ಟರು. ಸುಳ್ಯ ತಾಲೂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಜಣ್ಣ ಅವರು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ. ಎಂ. ಅವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಕಾರ್ಯಕ್ರಮದ ಮಾರ್ಗದರ್ಶಕರಾದ ಪ್ರಕಾಶ್ ಮೂಡಿತ್ತಾಯ, ಉಪಪ್ರಾಂಶುಪಾಲರು, ಸಹಕಾರಿ ಪದವಿಪೂರ್ವ ಕಾಲೇಜು, ಸುಳ್ಯ ಇವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ವಿವಿಧ ಸಂಸ್ಥೆಗಳ ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು ಹಾಗೂ ಅಧ್ಯಾಪಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ತೀರ್ಪುಗಾರರಾಗಿ ಸುಳ್ಯದ ಹಿರಿಯ ವಕೀಲರಾದ ಸುಕುಮಾರ್ ಕೋಡ್ತುಗುಳಿ, ಪುತ್ತೂರಿನ ಪ್ರೌಢಶಾಲಾ ಶಿಕ್ಷಕರಾದ ಗುಡ್ಡಪ್ಪ ಬಲ್ಲ್ಯ ಹಾಗೂ ರಾಮಕುಂಜ ಕಾಲೇಜಿನ ಉಪನ್ಯಾಸಕರಾದ ಶ್ರೀಮತಿ ತನುಜಾ ಅವರು ಸಹಕರಿಸಿದರು.

ಸಂಸದೀಯ ಕಲಾಪದಲ್ಲಿ ವಿದ್ಯಾರ್ಥಿಗಳು ಸಭಾಧ್ಯಕ್ಷರು, ಸಂಸದರು ಹಾಗೂ ಸಚಿವರ ಪಾತ್ರಗಳನ್ನು ನಿರ್ವಹಿಸಿ, ವಿವಿಧ ಸಾರ್ವಜನಿಕ ಸಮಸ್ಯೆಗಳ ಕುರಿತು ಚರ್ಚಿಸಿದರು. ಪ್ರಶ್ನೋತ್ತರ ಕಲಾಪ, ವಿಷಯ ಮಂಡನೆ ಹಾಗೂ ಚರ್ಚೆಗಳ ಮೂಲಕ ಸಂಸದೀಯ ಕಾರ್ಯವಿಧಾನವನ್ನು ಪ್ರಾಯೋಗಿಕವಾಗಿ ಪರಿಚಯಿಸಿಕೊಂಡರು.

ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಸುಮಾರು ಎಂಟು ಶಿಕ್ಷಣ ಸಂಸ್ಥೆಗಳ 60 ವಿದ್ಯಾರ್ಥಿಗಳು ಭಾಗವಹಿಸಿದ್ದರು. ನೆಹರೂ ಮೆಮೋರಿಯಲ್ ಕಾಲೇಜಿನ ಶ್ರೇಯಾ ಎಂ.ಜಿ. ಪ್ರಥಮ ಸ್ಥಾನ, ಕೆವಿಜಿ ಕಾನೂನು ಕಾಲೇಜಿನ ವಿದ್ಯಾರ್ಥಿ ರಾಜೇಶ್ ನಾಯ್ಕ್ ದ್ವಿತೀಯ ಸ್ಥಾನ ಹಾಗೂ ಕೆಪಿಎಸ್ ಸುಳ್ಯದ ವಿದ್ಯಾರ್ಥಿನಿ ಕು. ಅನುಷಾ ತೃತೀಯ ಸ್ಥಾನವನ್ನು ಪಡೆದುಕೊಂಡರು. ಒಟ್ಟು ಭಾಗವಹಿಸಿದ 60 ವಿದ್ಯಾರ್ಥಿಗಳಲ್ಲಿ 14 ವಿದ್ಯಾರ್ಥಿಗಳನ್ನು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆ ಮಾಡಲಾಯಿತು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading