ವಿದ್ಯಾಮಾತಾ ಅಕಾಡೆಮಿಯಲ್ಲಿ ಮೂರು ದಿನಗಳ “ವಾಯ್ಸ್ ಅಂಡ್ ವಿಷನ್” ತರಬೇತಿ ಕಾರ್ಯಕ್ರಮ ಮತ್ತು ಶಾರದಾ ಪೂಜೆ

ಸರಕಾರಿ ನೇಮಕಾತಿಗಳು, ಬ್ಯಾಂಕಿಂಗ್, ಸಶಸ್ತ್ರ ಪಡೆಗಳ ನೇಮಕಾತಿ, ಖಾಸಗಿ ಉದ್ಯೋಗ, ಕೌಶಲ್ಯ ತರಬೇತಿ ನೀಡುವ ಕರಾವಳಿಯ ಪ್ರತಿಷ್ಠಿತ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಮೂರು ದಿನಗಳ ವಾಯ್ಸ್ ಅಂಡ್ ವಿಷನ್ ಎಂಬ ಭಾಷಣ ಕಲೆ ಮತ್ತು ನಾಯಕತ್ವ ವೃದ್ಧಿಯನ್ನು ಸಂಯೋಜಿಸುವ ಕಾರ್ಯಕ್ರಮವನ್ನು ಅ. 12 ರಿಂದ 14ರವರೆಗೆ ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳ ಆಲೋಚನಾ ಶಕ್ತಿ, ಭವಿಷ್ಯದ ದೃಷ್ಟಿಕೋನ, ಮಾತುಗಾರಿಕೆಗಳನ್ನು ಹೆಣೆದು, ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವಿಶೇಷ ಅಂದರೆ, ವಿದ್ಯಾರ್ಥಿಗಳನ್ನು, ತರಬೇತುದಾರರನ್ನು ಮತ್ತು ಪೋಷಕರನ್ನು ಒಂದೇ ವೇದಿಕೆಯಲ್ಲಿ ತರಬೇತಿಗೆ ಒಳಪಡಿಸಲಾಗಿತ್ತು.
ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ, ಪುತ್ತೂರು ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ನಿಹಾಲ್ ಪಿ ಶೆಟ್ಟಿಯವರು ಉದ್ಘಾಟಿಸಿ, ಮಾತನಾಡುತ್ತಾ, “ಪ್ರಸ್ತುತ ಯಾವ ಪದವಿ, ಸ್ನಾತಕೋತ್ತರ ಪದವಿ ಓದುತ್ತೇವೆ ಅನ್ನೋದು ಮುಖ್ಯ ಅಲ್ಲ, ಆಧುನಿಕ ಜಗತ್ತಿನಲ್ಲಿ ಉದ್ಯೋಗ ಕೌಶಲ್ಯತೆ ಪ್ರಮುಖ ಮಾನದಂಡವಾಗಿರುತ್ತದೆ. ವಿದ್ಯಾಮಾತಾ ಕೇವಲ ಪುಸ್ತಕದ ಓದಿಗೆ ಮಾತ್ರ ಸೀಮಿತವಾಗಿರದೆ, ಬದುಕಿನ ಅಡಿಪಾಯವನ್ನೇ ಹಾಕಿಕೊಡುತ್ತಿದೆ. ಇಂತಹ ಸಂಸ್ಥೆಯಲ್ಲಿ ತರಬೇತಿ ಪಡೆಯುತ್ತಿರುವುದು ನಿಮ್ಮೆಲ್ಲರ ಭಾಗ್ಯ” ಎಂದು ಸಂಸ್ಥೆಗೆ ಮತ್ತು ವಿದ್ಯಾರ್ಥಿಗಳಿಗೆ ಶುಭವನ್ನು ಹಾರೈಸಿದರು.
ಮೂರು ದಿನದ ತರಬೇತಿಯನ್ನು ಶ್ರೀರಾಮಕುಂಜೇಶ್ವರ ಪ್ರೌಢಶಾಲೆಯ ವಿಶ್ರಾಂತ ಮುಖ್ಯ ಗುರುಗಳಾದ ಸತೀಶ್ ಭಟ್ ಬಿಳಿನೆಲೆ ಹಾಗೂ ಜೆಸಿಐ ರಾಷ್ಟ್ರೀಯ ತರಬೇತುದಾರರಾದ ಕೃಷ್ಣ ಮೋಹನ್ ರವರು ನಡೆಸಿಕೊಟ್ಟರು.
ಸಮಾರೋಪ ಮತ್ತು ಶಾರದಾ ಪೂಜೆ

. . . . . . . . .

ದಿನಾಂಕ: 12-10-2026 ಸೋಮವಾರದಂದು ಗಣಪತಿ ಹೋಮ ಹಾಗೂ ದುರ್ಗಾ ನಮಸ್ಕಾರ ಪೂಜೆ ನಡೆದು, 14-10-2026 ಬುಧವಾರದಂದು ಮಧ್ಯಾಹ್ನ ವಿದ್ಯಾರ್ಥಿಗಳಿಂದ ಭಜನೆ ನಡೆಯಿತು. ಶಾರದಾ ಪೂಜೆಯನ್ನು ಸತೀಶ್ ಭಟ್ ಹಾಗೂ ಸುಮನ್ ಸತೀಶ್ ಭಟ್ ದಂಪತಿಗಳು ನೆರವೇರಿಸಿದರು. ತಾಲೂಕು ಕಾರ್ಯ ನಿರ್ವಹಣಾಧಿಕಾರಿ ನವೀನ್ ಭಂಡಾರಿ ಅವರು ತರಬೇತಿ ಕಾರ್ಯಗಾರದಲ್ಲಿ ಅತ್ಯುತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ ಮಾಡಿ, ಮಾತನಾಡುತ್ತಾ ತಾನು ಕೂಡ ಸರಕಾರಿ ಹುದ್ದೆಯ ಆಕಾಂಕ್ಷಿಯಾಗಿ ಪ್ರಯತ್ನ ಮಾಡುವಾಗ ಇದು ನಿಮ್ಮಿಂದ ಸಾಧ್ಯವಾ? ಅಂತ ಪ್ರಶ್ನೆ ಮಾಡಿದವರು ಹೆಚ್ಚು. ನಮ್ಮ ಭಾಗದಲ್ಲಿ ಸರಕಾರಿ ಹುದ್ದೆಗಳಿಗೆ ಪ್ರಯತ್ನ ಮಾಡುವವರು ತುಂಬಾ ಕಡಿಮೆ, ಪ್ರಯತ್ನ ಮಾಡುವವರಿಗೆ ಪ್ರೋತ್ಸಾಹ ಕೊಡುವವರು ಇನ್ನೂ ಕಡಿಮೆ, ಆದರೆ ನಿರಂತರ ಪ್ರಯತ್ನದಿಂದ ನಮ್ಮ ಭಾಗದಲ್ಲೂ ಸರಕಾರಿ ಹುದ್ದೆಗೆ ಹೋಗಲು ಸಾಧ್ಯವಿದೆ ಎಂದು ವಿದ್ಯಾಮಾತ ಅಕಾಡೆಮಿಯು ಸಾಭೀತು ಮಾಡಿದೆ. ಈ ನಿಟ್ಟಿನಲ್ಲಿ ವಿದ್ಯಾಮಾತಾ ಅಕಾಡೆಮಿಯು ಮಾಡುತ್ತಿರುವ ಎಲ್ಲಾ ಸಮಾಜಮುಖಿ ಸಾಧನಗಳು ಮತ್ತು ತರಬೇತಿಗಳು ಯಶಸ್ವಿಯಾಗಲಿ” ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಪೋಷಕರೊಂದಿಗೆ ಸಂಪನ್ಮೂಲ ವ್ಯಕ್ತಿಗಳು ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ಯವರು ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಸ್ಥೆಯ ನಿರ್ದೇಶಕಿ ರಮ್ಯಾ ಭಾಗ್ಯೇಶ್ ರೈ, ತರಬೇತುದಾರರು, ಪೋಷಕರು, ವಿದ್ಯಾರ್ಥಿಗಳು, ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading