ಗ್ರಂಥಾಲಯ ವಿಜ್ಞಾನ ಸರ್ಟಿಫಿಕೇಟ್ ಕೋರ್ಸ್ ಫಲಿತಾಂಶ ಪ್ರಕಟ : ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಹರಿಹರ ಪಳ್ಳತ್ತಡ್ಕ ಹಾಗೂ ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕರು

ಸುಳ್ಯ ತಾಲೂಕಿನ ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಮೇಲ್ವಿಚಾರಕರಾದ ಶ್ರೀಮತಿ ಚಂದ್ರಿಕಾ.ಕೆ(435/500) ಹಾಗೂ ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಮೇಲ್ವಿಚಾರಕರಾದ ಶ್ರೀಮತಿ ಅಭಿಲಾಷಾ.ಎಸ್.ಎಂ(424/500) ಇವರು ಮಹಾತ್ಮಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವಿಶ್ವವಿದ್ಯಾಲಯ ಕೌಶಲ್ಯಭವನ ನಾಗಾವಿ, ಗದಗ ಇಲ್ಲಿ ನಡೆದ ಆರು ತಿಂಗಳ ಸರ್ಟಿಫಿಕೇಟ್ ಕೋರ್ಸ್ ನಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಸುಳ್ಯ ತಾಲೂಕು ಪಂಚಾಯತ್ ನಿರ್ದೇಶನದಂತೆ ಗದಗ ಯುನಿವರ್ಸಿಟಿ ಪರೀಕ್ಷೆಗೆ ಹಾಜರಾಗಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 21 ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರಗಳ ಮೇಲ್ವಿಚಾರಕರು ಪರೀಕ್ಷೆ ಬರೆದಿದ್ದರು. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading