ಎಸ್‌ಎಸ್‌ಪಿಯು ಸಿಇಟಿ ಶುಲ್ಕ ವಿವಾದ – ಶುಲ್ಕ ರದ್ಧತಿಗೆ ಎಬಿವಿಪಿ ಒತ್ತಾಯ – ವಿದ್ಯಾರ್ಥಿಗಳ ಮನವಿಗೆ ವ್ಯವಸ್ಥಪನಾ ಸಮಿತಿ ಅಧ್ಯಕ್ಷರ ಸ್ಪಂದನೆ

ಸುಬ್ರಹ್ಮಣ್ಯದ ಎಸ್‌ಎಸ್‌ಪಿಯು ಕಾಲೇಜಿನಲ್ಲಿ ಅನಧಿಕೃತ ಸಿಇಟಿ ಕೋಚಿಂಗ್ ಹೆಸರಿನಲ್ಲಿ ವಿದ್ಯಾರ್ಥಿಗಳಿಂದ ಶುಲ್ಕ ವಸೂಲಿ ಮಾಡಿರುವ ಆರೋಪದ ಕುರಿತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವತಿಯಿಂದ ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅಧ್ಯಕ್ಷರು ಹಾಗೂ ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

. . . . . . . . .

ಕಳೆದ ಕೆಲವು ವರ್ಷಗಳಿಂದ ಕಾಲೇಜಿನಲ್ಲಿ ಯಾವುದೇ ಅಧಿಕೃತ ಅನುಮತಿಯಿಲ್ಲದೆ ಸಿಇಟಿ ತರಗತಿಗಳನ್ನು ನಡೆಸಿ, ವಿದ್ಯಾರ್ಥಿಗಳಿಂದ ತಲಾ ಸುಮಾರು ₹16,000 ರಶೀದಿ ನೀಡದೆ ವಸೂಲಿ ಮಾಡಲಾಗಿದೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ. ಈ ಕುರಿತು ಪ್ರಶ್ನಿಸಿದ ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು ಗದರಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಈ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರು ಕಂಡುಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಎಬಿವಿಪಿ ಆಗ್ರಹಿಸಿದೆ.

. . . . . . .

ಮನವಿಗೆ ಸ್ಪಂದಿಸಿದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅಧ್ಯಕ್ಷರು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಸಕಾರಾತ್ಮಕವಾಗಿ ಆಲಿಸಿ, ಮುಂದಿನ ವರ್ಷದಿಂದ ವಿದ್ಯಾರ್ಥಿಗಳಿಂದ ಯಾವುದೇ ಶುಲ್ಕ ವಸೂಲಿ ಮಾಡದಂತೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.ಈ ಕುರಿತು ಮಾತನಾಡಿದ ಮುಳಿಯ ಸಾತ್ವಿಕ್, ಅಧ್ಯಕ್ಷರು, ಎಬಿವಿಪಿ ಬೆಂಬಲಿತ ಸರ್ವ ಕಾಲೇಜು ವಿದ್ಯಾರ್ಥಿ ಸಂಘ (2025–26), “ಅಧ್ಯಕ್ಷರು ನಮ್ಮ ಮನವಿಗೆ ಉತ್ತಮವಾಗಿ ಸ್ಪಂದಿಸಿ, ಮುಂದಿನ ವರ್ಷದಿಂದ ಯಾವುದೇ ಶುಲ್ಕ ವಸೂಲಿ ಮಾಡದಂತೆ ಭರವಸೆ ನೀಡಿರುವುದನ್ನು ನಾವು ಸ್ವಾಗತಿಸುತ್ತೇವೆ. ಆದರೆ, ಇಒ ಅವರ ಸ್ಪಂದನೆ ಮತ್ತು ವಾದದ ರೀತಿಯಿಂದ ನಮಗೆ ತೀವ್ರ ಅಸಮಾಧಾನವಾಗಿದೆ. ವಿದ್ಯಾರ್ಥಿಗಳ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ, ಜವಾಬ್ದಾರಿಯುತವಾಗಿ ಸ್ಪಂದಿಸುವುದು ಅಧಿಕಾರಿಗಳ ಕರ್ತವ್ಯ. ಇಒ ಅವರು ಈ ಪ್ರಕರಣದ ಕುರಿತು ಸೂಕ್ತ ಕ್ರಮ ಕೈಗೊಂಡು, ಆರೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ತಪ್ಪಿತಸ್ಥರು ಕಂಡುಬಂದಲ್ಲಿ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು. ಅಲ್ಲದೆ, ಅಧ್ಯಕ್ಷರು ನೀಡಿರುವ ಭರವಸೆಯಂತೆ ಮುಂದಿನ ವರ್ಷದಿಂದ ಶುಲ್ಕ ವಸೂಲಿ ನಡೆಯದಂತೆ ಖಚಿತಪಡಿಸಬೇಕು” ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಎಬಿವಿಪಿ ಕಡಬ ತಾಲೂಕು ಸಂಚಾಲಕರಾದ ಹಾರ್ಧಿಕ್, ಸುಬ್ರಹ್ಮಣ್ಯ ವಿದ್ಯಾರ್ಥಿ ನಾಯಕರಾದ ಹವ್ಯಾಸ್ ಗೌಡ, ಚಿನ್ಮಯ್ ಡಿ.ಎಸ್., ಶ್ರೀಶರಣ್ ಮೊಗ್ರ ಮತ್ತು ಅಮಿತ್ ನಾಯಕ್ ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading