ಪಂಜ: ಮದ್ಯವರ್ಜನ ಶಿಬಿರ ಉದ್ಘಾಟನೆ – ಶಿಬಿರದ ಮೂಲಕ ದುಶ್ಚಟಮುಕ್ತ ಸಮಾಜ ನಿರ್ಮಾಣ ಸಾಧ್ಯ; ಶ್ರೇಯಂಶ್ ಕುಮಾರ್

ಪಂಜ: ಮದ್ಯವರ್ಜನ ಶಿಬಿರಗಳ ಮೂಲಕ ದುಶ್ಚಟಮುಕ್ತ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಅಖಿಲ ಕರ್ನಾಟಕ ಜನಜಾಗೃತಿ ಟ್ರಸ್ಟ್‌ನ ಶ್ರೇಯಂಶ್ ಕುಮಾರ್ ಹೇಳಿದರು.

. . . . . . . . .

ಅವರು ಅ. 24ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಸುಳ್ಯ ತಾಲೂಕು, ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ಪಂಜ ವಲಯ, ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಪಂಜ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸಹಯೋಗದಲ್ಲಿ ನಡೆದ ಮದ್ಯವರ್ಜನ ಶಿಬಿರದ ಕಾರ್ಯಕ್ರಮದಲ್ಲಿ ದೀಪ ಪ್ರಜ್ವಲಿಸಿ ಮಾತನಾಡಿದರು.

. . . . . . .

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ, ಪೂಜ್ಯ ಖಾವಂದರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಸಮಾಜಮುಖಿ ಕಾರ್ಯಗಳನ್ನು ಉತ್ತಮ ರೀತಿಯಲ್ಲಿ ನಡೆಸುತ್ತಿದೆ. ಶಿಬಿರದಲ್ಲಿ ಭಾಗವಹಿಸಿರುವ ಶಿಬಿರಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ದುಶ್ಚಟಗಳಿಂದ ದೂರವಾಗಿ ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ.), ಸುಳ್ಯ ತಾಲೂಕು ಅಧ್ಯಕ್ಷ ವೆಂಕಪ್ಪ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಡಾ. ರಾಮಯ್ಯ ಭಟ್, ಮಾಧವ ಜಾಕೆ, ದೇವಿಪ್ರಸಾದ್ ಕಾನತ್ತೂರು, ಪದ್ಮನಾಭ ರೈ ಅಗೋಳಿಬೈಲು ಗುತ್ತು, ಭರತ್ ನೆಕ್ರಾಜೆ, ನೇಮಿರಾಜ ಪಲ್ಲೋಡಿ, ಪಿ.ಸಿ. ಜಯರಾಮ್, ವಿಮಲಾ ರಂಗಯ್ಯ, ಮೋನಪ್ಪ ಗೌಡ ಬೊಳ್ಳಾಜೆ ಹಾಗೂ ಧರ್ಮಪಾಲ್ ಕಣಕಲ್ ಉಪಸ್ಥಿತರಿದ್ದರು.

ಯೋಜನಾಧಿಕಾರಿ ಮಾಧವ ಗೌಡ ಸ್ವಾಗತಿಸಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ಯೋಜನಾಧಿಕಾರಿ ಗಣೇಶ್ ಆಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಮೇಲ್ವಿಚಾರಕರು ಕಾರ್ಯಕ್ರಮ ನಿರೂಪಿಸಿದರು. ವಿನೋದ್ ಬೊಳ್ಮಲೆ ವಂದಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading