ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಮಾಜಿ ಪ್ರಧಾನಮಂತ್ರಿ, ಶ್ರೀಮತಿ ಇಂದಿರಾ ಗಾಂಧಿ ಅವರ 42ನೇ ಪುಣ್ಯಸ್ಮರಣೆ

ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಮಾಜಿ ಪ್ರಧಾನಮಂತ್ರಿ, ಶ್ರೀಮತಿ ಇಂದಿರಾ ಗಾಂಧಿ ಅವರ 42ನೇ ಪುಣ್ಯಸ್ಮರಣೆ ಕಾರ್ಯಕ್ರಮ ಇಂದು ನಡೆಯಿತು.

. . . . . . . . .

ದೇಶದ ಏಕತೆ, ಅಖಂಡತೆ, ಜಾತ್ಯತೀತತೆ ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳ ರಕ್ಷಣೆಗಾಗಿ ಶ್ರೀಮತಿ ಇಂದಿರಾ ಗಾಂಧಿಯವರು ನೀಡಿದ ಕೊಡುಗೆ ಮತ್ತು ತ್ಯಾಗವನ್ನು ಸ್ಮರಿಸಲಾಯಿತು. ಅವರ ಆದರ್ಶಗಳು ಸದೃಢ, ಸೌಹಾರ್ದಯುತ ಭಾರತ ನಿರ್ಮಾಣಕ್ಕೆ ಸದಾ ಮಾರ್ಗದರ್ಶಿಯಾಗಿವೆ ನುಡಿನಮನ ಸಲ್ಲಿಸಲಾಯಿತು.

. . . . . . .

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ ಎಂ ಶಾಹಿದ್ ತೆಕ್ಕಿಲ್, ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪಿ ಎಸ್ ಗಂಗಾಧರ್, ಸುಳ್ಯ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಗೋಕುಲ್ ದಾಸ್, ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ, ಇಂಟಕ್ ಅಧ್ಯಕ್ಷ ಶಾಫಿ ಕುತ್ತಮೊಟ್ಟೆ, ಡಿಸಿಸಿ ಸದಸ್ಯ ನಂದರಾಜ್ ಸಂಕೇಶ್, ನಗರ ಪಂಚಾಯತ್ ಮಾಜಿ ಸದಸ್ಯ ಡೇವಿಡ್ ಧೀರಾ ಕ್ರಾಸ್ತ, ಪ್ರಮುಖರಾದ ಕೇಶವ ಆಲೆಟ್ಟಿ, ಸತ್ಯನಾರಾಯಣ ಕೊಲ್ಲಮೊಗ್ರು, ಎಂ ಎಸ್ ಕುಮಾರ್, ಜುಬೀರ್ ಅರಂತೋಡು, ಮಧುಸೂದನ್ ಬೂಡು, ಮೊದಲಾದವರು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading