ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ಸುಳ್ಯದಲ್ಲಿ ಕಾಂಗ್ರೆಸ್ ನಿಂದ ಮೌನ ಪ್ರತಿಭಟನೆ

ಸುಳ್ಯ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ನಡೆಯುತ್ತಿರುವ ಪ್ರತಿಭಟನಾ ರ‍್ಯಾಲಿಗೆ ಬೆಂಬಲ ಸೂಚಿಸಿ ಸುಳ್ಯದಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಮೌನ ಪ್ರತಿಭಟನೆ ನಡೆಸಿದರು.

. . . . . . . . .

ಸುಳ್ಯದ ಗಾಂಧಿನಗರದಲ್ಲಿರುವ ಮಹಾತ್ಮ ಗಾಂಧೀಜಿ ಪ್ರತಿಮೆ ಬಳಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಜಮಾಯಿಸಿ ಮೌನ ಪ್ರತಿಭಟನೆ ನಡೆಸುವ ಮೂಲಕ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನಾ ರ‍್ಯಾಲಿಗೆ ತಮ್ಮ ಬೆಂಬಲ ವ್ಯಕ್ತಪಡಿಸಿದರು.

. . . . . . .

ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣಾ ಆಯೋಗದ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ನಿಷ್ಪಕ್ಷಪಾತತೆಯನ್ನು ಕಾಪಾಡುವುದು ಅಗತ್ಯ ಎಂದು ಪ್ರತಿಭಟನಾಕಾರರು ಒತ್ತಿಹೇಳಿದರು. ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ವಿರೋಧ ಪಕ್ಷಗಳು ವ್ಯಕ್ತಪಡಿಸುತ್ತಿರುವ ಆಕ್ಷೇಪಣೆಗಳಿಗೆ ಸೂಕ್ತ ಸ್ಪಷ್ಟನೆ ನೀಡಬೇಕು ಹಾಗೂ ಪ್ರಜಾಪ್ರಭುತ್ವದ ಆಶಯಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ರಾಹುಲ್ ಗಾಂಧಿ ನೇತೃತ್ವದಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನಾ ರ‍್ಯಾಲಿಗೆ ಬೆಂಬಲ ಸೂಚಿಸುವ ಉದ್ದೇಶದಿಂದ ಸುಳ್ಯದಲ್ಲಿಯೂ ಮೌನ ಪ್ರತಿಭಟನೆ ಆಯೋಜಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದರು.ಈ ಸಂದರ್ಭದಲ್ಲಿ ಸುಳ್ಯ ಕಾಂಗ್ರೆಸ್‌ನ ಪ್ರಮುಖ ಮುಖಂಡರು, ಪಕ್ಷದ ಪದಾಧಿಕಾರಿಗಳು, ವಿವಿಧ ಘಟಕಗಳ ಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading