ಸುಬ್ರಹ್ಮಣ್ಯದ ಡಾ. ರವಿ ಕಕ್ಕೆಪದವು ಅವರಿಗೆ “ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ”

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾಡಳಿತ ನೀಡುವ ಈ ಬಾರಿಯ “ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ”ಯು 119 ವ್ಯಕ್ತಿಗಳಿಗೆ ಹಾಗೂ 54 ಸಂಘ-ಸಂಸ್ಥೆಗಳಿಗೆ ಲಭಿಸಿದ್ದು, ಸುಬ್ರಹ್ಮಣ್ಯದ ಡಾ. ರವಿ ಕಕ್ಕೆಪದವು ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ದೊರಕಿದೆ. ಅಶಕ್ತರಿಗೆ ಧನಸಹಾಯ, ಆಹಾರ ಸಾಮಾಗ್ರಿಗಳ ವಿತರಣೆ, ಮನೆ ನಿರ್ಮಾಣ, ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ನಿರಂತರ ಸ್ವಚ್ಛತಾ ಕಾರ್ಯಕ್ರಮಗಳು, ಶಾಲಾ ಮಕ್ಕಳಿಗೆ ಪುಸ್ತಕ ಹಾಗೂ ಲೇಖನ ಸಾಮಗ್ರಿಗಳ ವಿತರಣೆ ಸೇರಿದಂತೆ ವಿವಿಧ ರೀತಿಯಲ್ಲಿ ನಿರಂತರವಾಗಿ ತಮ್ಮನ್ನು ತಾವು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ನೆಲೆಯಲ್ಲಿ ರವಿ ಕಕ್ಕೆಪದವು ಅವರಿಗೆ ಈ ಪ್ರಶಸ್ತಿ ಲಭಿಸಿದ್ದು, ನ.01 ರಂದು ಮಂಗಳೂರಿನಲ್ಲಿ ನಡೆದ ಜಿಲ್ಲಾ ರಾಜ್ಯೋತ್ಸವ ಆಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ ಖಾದರ್ ಅವರು ಪ್ರಶಸ್ತಿ ಪ್ರಧಾನ ಮಾಡಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading