ಮಜ್ಜಾರಡ್ಕ ಶ್ರೀ ವಿಷ್ಣು ಯುವಸಿರಿ ಸಾಂಘಿಕ ಪ್ರಶಸ್ತಿ – 2026 ಮಯೂರಿ ಯುವತಿ ಮಂಡಲದ ಮುಡಿಗೆ

ಚೊಕ್ಕಾಡಿ : ಮಜ್ಜಾರಡ್ಕ ಶ್ರೀ ವಿಷ್ಣು ಯುವ ಶಕ್ತಿ ಬಳಗ (ರಿ.) ವತಿಯಿಂದ ಜಿಲ್ಲಾ ಮಟ್ಟದಲ್ಲಿ ನೀಡಲಾಗುವ ಪ್ರತಿಷ್ಠಿತ “ಮಜ್ಜಾರಡ್ಕ ಶ್ರೀ ವಿಷ್ಣು ಯುವಸಿರಿ ಸಾಂಘಿಕ ಪ್ರಶಸ್ತಿ – 2026” ಚೊಕ್ಕಾಡಿಯ ಮಯೂರಿ ಯುವತಿ ಮಂಡಲ (ರಿ.) ಆಯ್ಕೆಯಾಗಿದ್ದು, ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

. . . . . . . . .

ಮಂಡಲವು ಕಳೆದ ಹಲವು ವರ್ಷಗಳಿಂದ ಸಮಾಜಮುಖಿ ಹಾಗೂ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ಸ್ವಚ್ಛತಾ ಅಭಿಯಾನ, ಪರಿಸರ ಸಂರಕ್ಷಣೆ, ಸಾಮಾಜಿಕ ಜಾಗೃತಿ ಹಾಗೂ ವಿವಿಧ ಜನಪರ ಕಾರ್ಯಕ್ರಮಗಳ ಮೂಲಕ ಸಮಾಜದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದೆ.

. . . . . . .

ಮಂಡಲದ ಸದಸ್ಯರ ಒಗ್ಗಟ್ಟು, ನಿರಂತರ ಪರಿಶ್ರಮ, ಸೇವಾ ಮನೋಭಾವ ಮತ್ತು ಸಮಾಜಮುಖಿ ಕಾರ್ಯಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಈ ಗೌರವವು ಮಂಡಲದ ಸದಸ್ಯರಲ್ಲಿ ಮತ್ತಷ್ಟು ಉತ್ಸಾಹ ಮತ್ತು ಹೊಸ ಹುರುಪನ್ನು ತುಂಬಿದೆ.

ಈ ಅಮೂಲ್ಯ ಗೌರವಕ್ಕೆ ಕಾರಣರಾದ ಮಜ್ಜಾರಡ್ಕ ಶ್ರೀ ವಿಷ್ಣು ಯುವ ಶಕ್ತಿ ಬಳಗದ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರಿಗೆ ಮಯೂರಿ ಯುವತಿ ಮಂಡಲದ ವತಿಯಿಂದ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಲಾಗಿದೆ. ಮಂಡಲದ ಈ ಸಾಧನೆಗೆ ಸಹಕರಿಸಿದ ಎಲ್ಲರಿಗೂ ಅಭಿನಂದನೆಗಳನ್ನು ತಿಳಿಸಲಾಗಿದೆ.

“ಮಯೂರಿಯ ಸಾಧನೆಯ ಕಿರೀಟಕ್ಕೆ ಮತ್ತೊಂದು ಹೆಮ್ಮೆಯ ಗರಿ ಸೇರ್ಪಡೆಯಾಗಿದೆ.”


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading