ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಸುಳ್ಯ : ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ನವೆಂಬರ್ 4ರಂದು ಬುಧವಾರ ಕನ್ನಡಾಭಿಮಾನ ಮತ್ತು ಸಂಭ್ರಮದಿಂದ ಆಚರಿಸಲಾಯಿತು.

. . . . . . . . .

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕನ್ನಡಾಭಿಮಾನಿ ಹಾಗೂ ಗಾಯಕರಾದ ಕೆ.ಆರ್. ಗೋಪಾಲಕೃಷ್ಣ ಅವರು ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯ ಮಹತ್ವವನ್ನು ಮಕ್ಕಳಿಗೆ ತಿಳಿಸಿದರು. ಅಲ್ಲದೆ, ಮಕ್ಕಳಿಗೆ ಕನ್ನಡ ಹಾಡೊಂದನ್ನು ಕಲಿಸಿಕೊಟ್ಟು ಅವರೊಂದಿಗೆ ಹಾಡುವ ಮೂಲಕ ಮಕ್ಕಳಲ್ಲಿ ಕನ್ನಡ ಭಾಷೆಯ ಬಗ್ಗೆ ಆಸಕ್ತಿ ಮತ್ತು ಅಭಿಮಾನ ಮೂಡಿಸಿದರು. ಶಾಲೆಯ ಸಂಚಾಲಕಿ ಶ್ರೀಮತಿ ಗೀತಾಂಜಲಿ ಟಿ.ಜಿ. ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

. . . . . . .

ವಿದ್ಯಾರ್ಥಿಗಳು ಕನ್ನಡ ಭಾಷಣ, ಕನ್ನಡ ಗೀತೆ, ಗಾದೆಗಳ ಪ್ರಸ್ತುತಿ ಹಾಗೂ ನೃತ್ಯದ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಶಿಕ್ಷಕಿ ಶ್ವೇತಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ಚಿನ್ಮಯಿ ಪ್ರಾರ್ಥನೆ ಸಲ್ಲಿಸಿದರು. ಶಿಕ್ಷಕಿ ಫಬೀದಾ ಸ್ವಾಗತಿಸಿದರು.

ಮುಖ್ಯ ಅತಿಥಿಗಳ ಸಂದೇಶ ಹಾಗೂ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ಸಮಾರಂಭದ ವಿಶೇಷ ಆಕರ್ಷಣೆಯಾಗಿದ್ದವು.ಮಕ್ಕಳಲ್ಲಿ ಕನ್ನಡ ಭಾಷೆ, ನಾಡು, ನುಡಿ ಮತ್ತು ಸಂಸ್ಕೃತಿಯ ಬಗ್ಗೆ ಅಭಿಮಾನ ಬೆಳೆಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕನ್ನಡ ನಮ್ಮ ಹೆಮ್ಮೆ, ಕನ್ನಡ ನಮ್ಮ ಅಸ್ಮಿತೆ ಎಂಬ ಸಂದೇಶದೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading