ಸುಳ್ಯ ತಾಲೂಕು ಮಟ್ಟದ ವಿಜ್ಞಾನ ವಸ್ತುಪ್ರದರ್ಶನ ಸ್ಪರ್ಧೆ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಹಾಗೂ ಸಂತ ಜೋಸೆಫ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಸುಳ್ಯ ಇವರ ಸಂಯುಕ್ತ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ವಿಜ್ಞಾನ ವಸ್ತುಪ್ರದರ್ಶನ ಸ್ಪರ್ಧೆಯನ್ನು ನವೆಂಬರ್ 3 ರಂದು ಸಂತ ಜೋಸೆಫ್ ಪ್ರೌಢಶಾಲಾ ಸಭಾಂಗಣದಲ್ಲಿ ಆಯೋಜಿಸಲಾಯಿ ತು.

. . . . . . . . .

ಕಾರ್ಯಕ್ರಮವನ್ನು ಶಿಕ್ಷಣ ಇಲಾಖೆಯ ಸಂಯೋಜನಾಧಿಕಾರಿ ಉದಯಕುಮಾರ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ವಿಜ್ಞಾನ ವಸ್ತು ಪ್ರದರ್ಶನ ಹಮ್ಮಿಕೊಳ್ಳುವ ಉದ್ದೇಶದ ಬಗ್ಗೆ ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಕೋರಿದರು. ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ, ಸೃಜನಶೀಲತೆ, ಸಂಶೋಧನಾ ಪ್ರವೃತ್ತಿ ಹಾಗೂ ವೈಜ್ಞಾನಿಕ ಚಿಂತನೆ ಬೆಳೆಸುವ ಉದ್ದೇಶದಿಂದ ಈ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು.

. . . . . . .

ವಿವಿಧ ಶಾಲೆಗಳ ವಿದ್ಯಾರ್ಥಿಗಳು ವಿಜ್ಞಾನಕ್ಕೆ ಸಂಬಂಧಿಸಿದ ವೈವಿಧ್ಯಮಯ ಮಾದರಿಗಳು ಮತ್ತು ಪ್ರಯೋಗಗಳನ್ನು ಪ್ರದರ್ಶಿಸಿದರು. ವಿದ್ಯಾರ್ಥಿಗಳು ತಮ್ಮ ಮಾದರಿಗಳ ಕಾರ್ಯವಿಧಾನ ಮತ್ತು ಉಪಯೋಗಗಳನ್ನು ವಿವರಿಸಿದರು. ಪ್ರದರ್ಶನವು ಎಲ್ಲರ ಗಮನ ಸೆಳೆಯಿತು.

 ಶಾಲಾ ಮುಖ್ಯೋಪಾಧ್ಯಾಯಿನಿ ಸಿ.ಮೇರಿ ಸ್ಟೆಲ್ಲಾ, ಕೆ.ಪಿ ಎಸ್ ಗಾಂಧಿನಗರ ವಿಜ್ಞಾನ ಶಿಕ್ಷಕರಾದ ಇಬ್ರಾಹಿಂ ಎಸ್ ಎಂ, ನಿವೃತ್ತ ವಿಜ್ಞಾನ ಶಿಕ್ಷಕರಾದ ಪಿ. ಎನ್. ಭಟ್ ಬಾಳಿಲ ವೇದಿಕೆಯಲ್ಲಿ ಉಪಸ್ಥಿತರಿದ್ದರು.

 ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ತೀರ್ಪುಗಾರರಾಗಿ ಪಿ.ಎನ್. ಭಟ್, ಶ್ರೀ ಚಂದ್ರಶೇಖರ್, ಶ್ರೀಮತಿ ಕೃತಿ, ಶ್ರೀಮತಿ ದೀಪ್ತಿ ಸಹಕರಿಸಿದರು. ಸಂತ ಜೋಸೆಫ್ ಶಾಲೆಯ ವಿಜ್ಞಾನ ಶಿಕ್ಷಕಿ ಸವಿತ . ಎಂ ಕಾರ್ಯಕ್ರಮ ನಿರೂಪಣೆ ಮಾಡಿ, ವಿಜ್ಞಾನ ಶಿಕ್ಷಕಿ ಅಕ್ಷತಾ ಪಿ.ಎಂ ಸಹಕರಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading