- Thursday
- November 5th, 2026
ಸುಳ್ಯ : ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಮುಂಭಾಗದ ಸಂತೋಷ್ ಎಂಪೋರಿಯಂ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ಪ್ರಸಿದ್ಧ ಚಿನ್ನಾಭರಣ ಮಳಿಗೆ 'ಸ್ವರ್ಣಂ ಜ್ಯುವೆಲ್ಸ್'ನಲ್ಲಿ ಬೆಳಕಿನ ಹಬ್ಬ ದೀಪಾವಳಿಯ ಶುಭ ಸಂದರ್ಭದಲ್ಲಿ ಗ್ರಾಹಕರಿಗಾಗಿ 'ಸ್ವರ್ಣಂ ದೀಪಂ' ವಿಶೇಷ ಆಫರ್‌ಗಳನ್ನು ಘೋಷಿಸಲಾಗಿದೆ. ಗ್ರಾಹಕರ ಅಭಿರುಚಿಗೆ ತಕ್ಕಂತೆ ನಿರಂತರ ಹೊಸತನವನ್ನು ಪರಿಚಯಿಸುತ್ತಿರುವ ಸಂಸ್ಥೆಯು, ಈ ಬಾರಿಯ ಹಬ್ಬದ ಖರೀದಿಗೆ ಪೂರಕವಾಗಿ ಆಕರ್ಷಕ...
ಸುಳ್ಯ–ಗುತ್ತಿಗಾರು–ಸುಬ್ರಹ್ಮಣ್ಯ ರಸ್ತೆಯ ಇಕ್ಕೆಲಗಳಲ್ಲಿ ಕಳೆಗಿಡಗಳು ಹಾಗೂ ಪೊದೆಗಳು ಬೆಳೆದು ನಿಂತಿದ್ದು, ವಾಹನ ಸವಾರರಿಗೆ ತೀವ್ರ ತೊಂದರೆ ಉಂಟಾಗುತ್ತಿದೆ. ವಿಶೇಷವಾಗಿ ರಸ್ತೆಯ ತಿರುವುಗಳಲ್ಲಿ ಕಾಡು ಬೆಳೆದು ರಸ್ತೆ ಸರಿಯಾಗಿ ಕಾಣದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಎದುರಿನಿಂದ ಬರುವ ವಾಹನಗಳು ಗೋಚರಿಸದೆ ಅಪಘಾತ ಸಂಭವಿಸುವ ಅಪಾಯ ಎದುರಾಗಿದೆ. ಈ ರಸ್ತೆಯಲ್ಲಿ ಪ್ರತಿದಿನ ನೂರಾರು ವಾಹನಗಳು ಸಂಚರಿಸುತ್ತಿದ್ದು, ರಸ್ತೆ ಬದಿಯ...
ಸುಬ್ರಹ್ಮಣ್ಯ: ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಸುಬ್ರಹ್ಮಣ್ಯದ ಕುಮಾರಸ್ವಾಮಿ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವು ಉತ್ತಮ ಪ್ರದರ್ಶನ ನೀಡಿ ನಾಲ್ಕನೇ ಸ್ಥಾನವನ್ನು ಗಳಿಸಿದೆ. ತಂಡದ ಸದಸ್ಯರಾದ ಅಮೃತಾ ಸಿ., ತನ್ವಿ, ನಂದಿತಾ ಕೆ.ವಿ. ಹಾಗೂ ಸಮೀಕ್ಷಾ ಪಂದ್ಯಾವಳಿಯಲ್ಲಿ ಭಾಗವಹಿಸಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ....
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 05 ನವೆಂಬರ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ನವೆಂಬರ್ 05) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು...
ಸುಳ್ಯ: “ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ವತಿಯಿಂದ ನ.6ರಂದು ನಡೆಯಲಿರುವ ಮಂಗಳೂರು ಚಲೋ ಕಾರ್ಯಕ್ರಮದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದಿಂದ 1,000 ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬಸ್ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ 1.30ರೊಳಗೆ ಮಾಣಿ ಜಂಕ್ಷನ್ ತಲುಪಿ ಭೋಜನ ಸ್ವೀಕರಿಸಿ, 3 ಗಂಟೆಯೊಳಗೆ ಮಂಗಳೂರಿನ ಕೇಂದ್ರ ಮೈದಾನಕ್ಕೆ ತಲುಪುವಂತೆ ವ್ಯವಸ್ಥೆ ಮಾಡಲಾಗಿದೆ” ಎಂದು ಬಿಜೆಪಿ...
ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್‌ನಲ್ಲಿ ಗ್ರಾಹಕರಿಗೆ ದೀಪಾವಳಿ ಹಬ್ಬದ ಸಂತೋಷವನ್ನು ಇಮ್ಮಡಿಗೊಳಿಸಲು "ದೀಪಾವಳಿ ವಿಶೇಷ ಕೊಡುಗೆಯನ್ನು ಸಂಸ್ಥೆ ಪ್ರಕಟಿಸಿದೆ. ನವೆಂಬರ್ 5ರಿಂದ 11ರವರೆಗೆ ಗ್ರಾಹಕರಿಗೆ ಚಿನ್ನಾಭರಣಗಳ VA ಶುಲ್ಕದ ಮೇಲೆ 30% ನೇರ ರಿಯಾಯಿತಿ, ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ಗೆ ರೂ.8000/- ನೇರ ರಿಯಾಯಿತಿ ಅಲ್ಲದೆ ಬೆಳ್ಳಿಯ ಆಭರಣಗಳ...
