ರಾಜ್ಯಮಟ್ಟಕ್ಕೆ ಆಯ್ಕೆಯಾದ ಅಮೃತಾ ಸಿ – ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಕುಮಾರಸ್ವಾಮಿ ಪಿಯು ಕಾಲೇಜಿನ ವಿದ್ಯಾರ್ಥಿನಿಯರ ಸಾಧನೆ

ಸುಬ್ರಹ್ಮಣ್ಯ: ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಸುಬ್ರಹ್ಮಣ್ಯದ ಕುಮಾರಸ್ವಾಮಿ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವು ಉತ್ತಮ ಪ್ರದರ್ಶನ ನೀಡಿ ನಾಲ್ಕನೇ ಸ್ಥಾನವನ್ನು ಗಳಿಸಿದೆ.

. . . . . . . . .

ತಂಡದ ಸದಸ್ಯರಾದ ಅಮೃತಾ ಸಿ., ತನ್ವಿ, ನಂದಿತಾ ಕೆ.ವಿ. ಹಾಗೂ ಸಮೀಕ್ಷಾ ಪಂದ್ಯಾವಳಿಯಲ್ಲಿ ಭಾಗವಹಿಸಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ತಂಡದ ಆಟಗಾರ್ತಿಯಾದ ಅಮೃತಾ ಸಿ. ಅವರು ತಮ್ಮ ಉತ್ತಮ ಆಟದ ಪ್ರದರ್ಶನದ ಮೂಲಕ ರಾಜ್ಯಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ಇದು ಕಾಲೇಜಿನ ಪಾಲಿಗೆ ಹೆಮ್ಮೆಯ ಸಂಗತಿಯಾಗಿದೆ.

. . . . . . .

ವಿದ್ಯಾರ್ಥಿನಿಯರಿಗೆ ದೈಹಿಕ ಶಿಕ್ಷಣ ನಿರ್ದೇಶಕಿಯಾದ ಕುಮಾರಿ ಪ್ರಜ್ಞಾ ಹಾಗೂ ಉಪನ್ಯಾಸಕರಾದ ಸುಬ್ರಹ್ಮಣ್ಯ ಅತ್ಯಾಡಿ ಅವರು ಮಾರ್ಗದರ್ಶನ ನೀಡಿ ಸಹಕರಿಸಿದರು. ವಿದ್ಯಾರ್ಥಿನಿಯರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading