ನ.12ರಂದು ಸುಳ್ಯದಲ್ಲಿ ತಾಲೂಕು ಮಟ್ಟದ ಉದ್ಯೋಗ ಮೇಳ – 50ಕ್ಕೂ ಅಧಿಕ ಪ್ರತಿಷ್ಠಿತ ಕಂಪೆನಿಗಳಿಂದ ನೇರ ಸಂದರ್ಶನ – ವಿವಿಧ ವಿದ್ಯಾರ್ಹತೆಯ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ

ಸುಳ್ಯ: ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮಂಗಳೂರು, ಸುಳ್ಯ ತಾಲೂಕು ಪಂಚಾಯತ್ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸುಳ್ಯ ತಾಲೂಕು ಇವರ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 12ರಂದು ಸುಳ್ಯ ತಾಲೂಕು ಮಟ್ಟದ ಉದ್ಯೋಗ ಮೇಳ-2026 ಆಯೋಜಿಸಲಾಗಿದೆ.

. . . . . . . . .

ಅಂದು ಪೂರ್ವಾಹ್ನ 10 ಗಂಟೆಯಿಂದ ಅಪರಾಹ್ನ 4 ಗಂಟೆಯವರೆಗೆ ಸುಳ್ಯ ತಾಲೂಕು ಪಂಚಾಯತ್ ಕಚೇರಿ ಆವರಣದಲ್ಲಿ ಉದ್ಯೋಗ ಮೇಳ ನಡೆಯಲಿದೆ. ಮೇಳದಲ್ಲಿ 50ಕ್ಕೂ ಅಧಿಕ ಪ್ರತಿಷ್ಠಿತ ಕಂಪೆನಿಗಳು ಭಾಗವಹಿಸಲಿದ್ದು, ಉದ್ಯೋಗಾಕಾಂಕ್ಷಿಗಳಿಗೆ ಕಂಪೆನಿಗಳ ಪ್ರತಿನಿಧಿಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳುವ ಅವಕಾಶ ಕಲ್ಪಿಸಲಾಗಿದೆ.

. . . . . . .

SSLC, PUC, ಐಟಿಐ, ಡಿಪ್ಲೊಮಾ, ಬಿ.ಎ., ಬಿ.ಕಾಂ., ಬಿ.ಬಿ.ಎ., ಬಿ.ಬಿ.ಎಂ., ಬಿ.ಸಿ.ಎ., ಬಿ.ಇ., ಬಿ.ಟೆಕ್, ಬಿ.ಎಸ್ಸಿ, ಬಿ.ಎಡ್, ಎಂ.ಎ., ಎಂ.ಕಾಂ., ಎಂ.ಎಸ್ಸಿ., ಎಂ.ಎಸ್.ಡಬ್ಲ್ಯೂ., ಎಂ.ಬಿ.ಎ., ಎಂ.ಸಿ.ಎ., ಎಂ.ಟೆಕ್ ಸೇರಿದಂತೆ ವಿವಿಧ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.

ಉದ್ಯೋಗಾಕಾಂಕ್ಷಿಗಳು ನೋಂದಣಿಗಾಗಿ ನೀಡಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಹೆಸರು ನೋಂದಾಯಿಸಿಕೊಳ್ಳಬಹುದು. ಉದ್ಯೋಗ ಮೇಳಕ್ಕೆ ಪ್ರವೇಶ ಉಚಿತವಾಗಿದ್ದು, ಹೆಚ್ಚಿನ ಮಾಹಿತಿಗಾಗಿ 9448625240 ಸಂಖ್ಯೆಯನ್ನು ಸಂಪರ್ಕಿಸಬಹುದು.

ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಉತ್ತಮ ಉದ್ಯೋಗಾವಕಾಶ ಪಡೆದುಕೊಂಡು ತಮ್ಮ ಜೀವನವನ್ನು ರೂಪಿಸಿಕೊಳ್ಳುವಂತೆ ಆಯೋಜಕರು ತಿಳಿಸಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading