ಹರಿಹರ ಪಲ್ಲತ್ತಡ್ಕ : ನ.12 ಮತ್ತು 13 ರಂದು ಆಧಾರ್ ತಿದ್ದುಪಡಿ, ಹೊಸ ನೋಂದಣಿ ಹಾಗೂ ಅಪಘಾತ ವಿಮೆ ನೋಂದಣಿಗೆ ಅವಕಾಶ

ಕೊಲ್ಲಮೊಗ್ರು ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ. ಮತ್ತು ಭಾರತೀಯ ಅಂಚೆ ಇಲಾಖೆ, ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಆಧಾರ್ ತಿದ್ದುಪಡಿ, ಹೊಸ ಆಧಾರ್ ನೋಂದಣಿ ಹಾಗೂ ಅಂಚೆ ಇಲಾಖೆಯ ಅಪಘಾತ ವಿಮೆ ನೋಂದಣಿ ಕಾರ್ಯಕ್ರಮವು ನವೆಂಬರ್ 12 ಮತ್ತು 13ರಂದು ಸಹಕಾರ ಸಂಘದ ಪ್ರಧಾನ ಕಚೇರಿಯಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಆಧಾರ್ ಕಾರ್ಡ್‌ನಲ್ಲಿರುವ ಹೆಸರು, ವಿಳಾಸ, ಜನ್ಮ ದಿನಾಂಕ, ಮೊಬೈಲ್ ಸಂಖ್ಯೆ ಸೇರಿದಂತೆ ಅಗತ್ಯ ತಿದ್ದುಪಡಿಗಳನ್ನು ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ, ಹೊಸದಾಗಿ ಆಧಾರ್ ನೋಂದಣಿ ಮಾಡಿಸಿಕೊಳ್ಳುವ ವ್ಯವಸ್ಥೆಯೂ ಇರಲಿದೆ.
ಇದರೊಂದಿಗೆ ಭಾರತೀಯ ಅಂಚೆ ಇಲಾಖೆಯ ವತಿಯಿಂದ ಕಡಿಮೆ ಪ್ರೀಮಿಯಂ ದರದಲ್ಲಿ ಅಪಘಾತ ವಿಮೆ ನೋಂದಣಿ ಮಾಡಿಕೊಳ್ಳಲು ಅವಕಾಶವಿದ್ದು, ಸಾರ್ವಜನಿಕರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಸಹಕಾರಿ ಸಂಘದ ಅಧ್ಯಕ್ಷ ಸೋಮಶೇಖರ ಕಟ್ಟೆಮನೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading