ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನಾಚರಣೆ

ಬೆಳ್ಳಾರೆ : ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನದ ಅಂಗವಾಗಿ ನವೆಂಬರ್ 7ರಂದು ಬೆಳ್ಳಾರೆಯ ಶೈನ್ ಮಾಲ್ ಮುಂಭಾಗದಲ್ಲಿ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ ಹಾಗೂ ಕ್ಯಾನ್ಸರ್ ಪೀಡಿತ ರೋಗಿಗೆ ಸಹಾಯಧನ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

. . . . . . . . .

ಈ ಸಂದರ್ಭದಲ್ಲಿ ಕ್ಯಾನ್ಸರ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕರಪತ್ರವನ್ನು ಬಿಡುಗಡೆಗೊಳಿಸಲಾಯಿತು. ಕರಪತ್ರವನ್ನು ಬ್ಯಾಂಕ್ ಆಫ್ ಬರೋಡಾದ ಮ್ಯಾನೇಜರ್ ಶ್ರೀಮತಿ ಭಾರತಿ ಮೇಡಂ ಬಿಡುಗಡೆಗೊಳಿಸಿದರು. ಬಳಿಕ ರೋಟರಿಯನ್ ಗಣೇಶ್ ಭಟ್ ಅವರು ಕ್ಯಾನ್ಸರ್ ಕಾಯಿಲೆಯ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿ, ಕಾಯಿಲೆಯ ಮುನ್ನೆಚ್ಚರಿಕೆ ಹಾಗೂ ತಡೆಗಟ್ಟುವ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿದರು.

. . . . . . .

ಇದೇ ಸಂದರ್ಭದಲ್ಲಿ ಕ್ಯಾನ್ಸರ್ ಪೀಡಿತ ಅಜೀಜ್ ಅವರಿಗೆ ರೋಟರಿ ಕ್ಲಬ್ ವತಿಯಿಂದ ಸಹಾಯಧನವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷ ರೋಟರಿಯನ್ ಆರಿಫ್ ಬೆಳ್ಳಾರೆ, ಕ್ಲಬ್‌ನ ಸದಸ್ಯರು, ಬ್ಯಾಂಕ್ ಆಫ್ ಬರೋಡಾದ ಸಿಬ್ಬಂದಿ ವರ್ಗದವರು ಹಾಗೂ ಸ್ಥಳೀಯ ಸಾರ್ವಜನಿಕರು ಉಪಸ್ಥಿತರಿದ್ದರು.

ಬಳಿಕ ಬೆಳ್ಳಾರೆ ಪೇಟೆಯ ವಿವಿಧೆಡೆ ಕ್ಯಾನ್ಸರ್ ಜಾಗೃತಿ ಪೋಸ್ಟರ್‌ಗಳನ್ನು ಅಂಟಿಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು. ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಉತ್ತಮ ಮೆಚ್ಚುಗೆ ವ್ಯಕ್ತವಾಯಿತು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading