ಸುಬ್ರಹ್ಮಣ್ಯ : ನ.22 ರಂದು “ಉಚಿತ ಕಣ್ಣಿನ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ”

ರೋಟರಿ ಕ್ಲಬ್ ಸುಬ್ರಹ್ಮಣ್ಯ, ಇನ್ನರ್‌ವ್ಹೀಲ್ ಕ್ಲಬ್ ಸುಬ್ರಹ್ಮಣ್ಯ, ಸೀನಿಯರ್ ಚೇಂಬರ್ ಸುಬ್ರಹ್ಮಣ್ಯ, ರವಿ ಕಕ್ಕೆಪದವು ಸಮಾಜಸೇವಾ ಟ್ರಸ್ಟ್ ಸುಬ್ರಹ್ಮಣ್ಯ ಇವುಗಳ ಸಂಯುಕ್ತಾಶ್ರಯದಲ್ಲಿ ರೋಟರಿ ಕ್ಲಬ್ ಕಣ್ಣಿನ ಆಸ್ಪತ್ರೆ ನಿರ್ವಹಣೆ ಪ್ರಸಾದ್ ನೇತ್ರಾಲಯ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಸುಬ್ರಹ್ಮಣ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(ಅಂಧತ್ವ ನಿವಾರಣಾ ವಿಭಾಗ) ಮಂಗಳೂರು ಇವುಗಳ ನೇತೃತ್ವದಲ್ಲಿ ನ.22 ಆದಿತ್ಯವಾರದಂದು ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 1:00 ಗಂಟೆಯವರೆಗೆ ಸುಬ್ರಹ್ಮಣ್ಯದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ “ಉಚಿತ ಕಣ್ಣಿನ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ” ನಡೆಯಲಿದ್ದು, ಶಿಬಿರದಲ್ಲಿ ಸಂಪೂರ್ಣ ಕಣ್ಣಿನ ತಪಾಸಣೆ ನಡೆಸಲಾಗುವುದು, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಉಚಿತ ಶಸ್ತ್ರಚಿಕಿತ್ಸೆ ಹಾಗೂ ಅಗತ್ಯವುಳ್ಳವರಿಗೆ ಉಚಿತ ಓದುವ ಕನ್ನಡಕ ನೀಡಲಾಗುವುದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಶಿಬಿರದಲ್ಲಿ ಭಾಗವಹಿಸಿ ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ಶಿಬಿರದ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದು, ಹೆಚ್ಚಿನ ಮಾಹಿತಿಗಾಗಿ 9964920233, 9880584766, 8971129121, 9880809459, 9449283974 ಸಂಪರ್ಕಿಸಬಹುದಾಗಿದೆ. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading