ಬೆಳ್ಳಾರೆ ಎಂಡೋ ಸಂತ್ರಸ್ತರ ಪಾಲನಾ ಕೇಂದ್ರದಲ್ಲಿ ದೀಪಾವಳಿ ಆಚರಣೆ

ಪ್ರತಿ ವರ್ಷ ವಿಭಿನ್ನ ಪರಿಕಲ್ಪನೆಯಲ್ಲಿ ದೀಪಾವಳಿ ಆಚರಿಸುತ್ತಿರುವ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ವತಿಯಿಂದ ಈ ವರ್ಷ ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಮತ್ತು ಜ್ಞಾನದೀಪ ಇಂಟರ್ಯಾಕ್ಟ್ ಕ್ಲಬ್ ನ ಸಹಯೋಗದಲ್ಲಿ ಜಿಲ್ಲಾ ಅರೋಗ್ಯ ಇಲಾಖೆಯಡಿಯಲ್ಲಿ ಬೆಂಗಳೂರಿನ ಉದ್ಭವ್ ಶೈಕ್ಷಣಿಕ ಮತ್ತು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನಿರ್ವಹಣೆಯಲ್ಲಿ ನಡೆಯುತ್ತಿರುವ ಬೆಳ್ಳಾರೆಯ ಎಂಡೋ ಸಂತ್ರಸ್ತರ ಪಾಲನಾ ಕೇಂದ್ರದಲ್ಲಿ ಆಚರಿಸಲಾಯಿತು.

. . . . . . . . .

ಪಾಲನಾ ಕೇಂದ್ರದ ಸಿಬ್ಬಂದಿಗಳನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷ ಆರೀಫ್ ಬಿ ಎಂ ಅಧ್ಯಕ್ಷತೆ ವಹಿಸಿದ್ದರು. ಪಾಲನಾ ಕೇಂದ್ರದ ವ್ಯವಸ್ಥಾಪಕಿ ಶರ್ಮಿಳಾ ವಿ ರೈ, ಇಂಟರ್ಯಾಕ್ಟ್ ಉಪಾಧ್ಯಕ್ಷ ಅನ್ವಿತ್ ರೈ , ರೋಟರಿ ಕ್ಲಬ್ ಝೋನಲ್ ಲೆಫ್ಟಿನೆಂಟ್ ಚಂದ್ರಶೇಖರ ರೈ ಬಜನಿ, ಇಂಟರ್ಯಾಕ್ಟ್ ಕಾರ್ಯದರ್ಶಿ ಕೀರ್ತನಾ ಉಪಸ್ಥಿತರಿದ್ದರು.

. . . . . . .

ಜ್ಞಾನದೀಪ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಪ್ರಸ್ತಾವಿಸಿ ಸ್ವಾಗತಿಸಿದರು. ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಕಾರ್ಯದರ್ಶಿ ಪ್ರಶಾಂತ್ ಟಿ ಎಂ ವಂದಿಸಿದರು. ಉಪನ್ಯಾಸ ವಿಜೇತ್ ಸುವರ್ಣ ಕಾರ್ಯಕ್ರಮ ನಿರ್ವಹಿಸಿದರು ಸಂಸ್ಥೆಯ ವಿದ್ಯಾರ್ಥಿಗಳು ಹೂವಿನ ಆಕರ್ಷಕ ರಂಗೋಲಿ ರಚಿಸಿ ದೀಪಗಳನ್ನು ಹಚ್ಚಿದರು. ದಿವ್ಯಾಂಗ ಚೇತನರೊಂದಿಗೆ ಸಹಭೋಜನ ಮಾಡಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading