ಸುಳ್ಯ: ಕಾರು ರಿವರ್ಸ್ ತೆಗೆಯುವಾಗ ಡಿಕ್ಕಿ, ತಾಯಿ ಸಾವು

ಸುಳ್ಯ: ಮನೆಯಂಗಳದಲ್ಲಿ ನಿಲ್ಲಿಸಿದ್ದ ಕಾರನ್ನು ಮಗ ರಿವರ್ಸ್ ತೆಗೆಯುತ್ತಿದ್ದ ವೇಳೆ ಹಿಂಭಾಗದಲ್ಲಿ ನಿಂತಿದ್ದ ತಾಯಿಗೆ ಕಾರು ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ನ. 11ರಂದು ಮಧ್ಯಾಹ್ನ ತಾಲೂಕಿನ ದುಗ್ಗಲಡ್ಕದಲ್ಲಿ ನಡೆದಿದೆ.

. . . . . . . . .

ದುಗ್ಗಲಡ್ಕದ ಕಮರುನ್ನಿಸಾ (45) ಮೃತಪಟ್ಟವರು. ಮನೆಯಂಗಳದಲ್ಲಿ ನಿಲ್ಲಿಸಿದ್ದ ಕಾರನ್ನು ಮಗ ಹಿಂದಕ್ಕೆ ಚಲಾಯಿಸುತ್ತಿದ್ದಾಗ ಹಿಂಭಾಗದಲ್ಲಿ ನಿಂತಿದ್ದ ತಾಯಿಯನ್ನು ಗಮನಿಸದೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡ ಕಮರುನ್ನಿಸಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

. . . . . . .

ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading