ಯೋಗ ಸ್ಪರ್ಧೆಯಲ್ಲಿ ಸೋನಾ ಅಡ್ಕಾರ್‌ಗೆ ದ್ವಿಮುಕುಟ ; ಮೈಸೂರು ವಲಯ ಮಟ್ಟದ ಯೋಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ – ರಾಜ್ಯಮಟ್ಟಕ್ಕೆ ಆಯ್ಕೆ

ಸುಳ್ಯ: ನಮ್ಮ ಸಂಸ್ಥೆಯಾದ MGM ವಿದ್ಯಾಸಂಸ್ಥೆಯ 8ನೇ ತರಗತಿಯ ಪ್ರತಿಭಾವಂತ ವಿದ್ಯಾರ್ಥಿನಿ ಕುಮಾರಿ ಸೋನಾ ಅಡ್ಕಾರ್ ಅವರು ಮೈಸೂರು ವಲಯ ಮಟ್ಟದ ಯೋಗ ಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆ ಮೆರೆದಿದ್ದಾರೆ.

. . . . . . . . .

ಇವರು Artistic Solo ಹಾಗೂ Traditional ಎಂಬ ಎರಡೂ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದು ಸಂಸ್ಥೆಗೆ ಹೆಮ್ಮೆ ತಂದಿದ್ದಾರೆ. ಈ ಅದ್ಭುತ ಸಾಧನೆಯ ಮೂಲಕ ರಾಜ್ಯಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆಯಾಗಿರುವುದು ಸಂಸ್ಥೆಯ ಸಂತೋಷವನ್ನು ಇಮ್ಮಡಿಗೊಳಿಸಿದೆ.

. . . . . . .

ವಿದ್ಯಾರ್ಥಿನಿಯ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ, ರಾಜ್ಯಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಸಾಧನೆ ಮಾಡಿ ಸಂಸ್ಥೆಗೆ ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading