ನ.20ರಂದು ಸುಳ್ಯ ಶ್ರೀ ರಾಮ ಭಜನಾ ಮಂದಿರದಲ್ಲಿ 85ನೇ ವರ್ಷದ ಏಕಾಹ ಭಜನೆ

ಸುಳ್ಯ : ಇಲ್ಲಿನ ಶ್ರೀ ರಾಮಪೇಟೆಯ ಶ್ರೀ ರಾಮ ಭಜನಾ ಮಂದಿರದಲ್ಲಿ 85ನೇ ವರ್ಷದ ಏಕಾಹ ಭಜನಾ ಕಾರ್ಯಕ್ರಮವು ನವೆಂಬರ್ 20ರಂದು ವಿಜೃಂಭಣೆಯಿಂದ ನಡೆಯಲಿದೆ.

. . . . . . . . .

ಪ್ರತಿವರ್ಷ ಕಾರ್ತಿಕ ಶುದ್ಧ ಏಕಾದಶಿಯಂದು ನಡೆಯುವ ಈ ಧಾರ್ಮಿಕ ಕಾರ್ಯಕ್ರಮವು ಅಂದು ಬೆಳಿಗ್ಗೆ 6.30ಕ್ಕೆ ದೀಪಪ್ರಜ್ವಲನೆಯೊಂದಿಗೆ ಆರಂಭಗೊಳ್ಳಲಿದೆ. ತ್ರಿಶೂಲಿನಿ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಬಳ್ಪ ಇದರ ಅನುವಂಶಿಕ ಮೊಕ್ತೇಸರರಾದ ಕೆ.ವಿ. ಶ್ರೀವತ್ಸ ಅವರು ದೀಪಪ್ರಜ್ವಲನೆ ನೆರವೇರಿಸಲಿದ್ದಾರೆ.

. . . . . . .

ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಸಂಜೆ 6.30ಕ್ಕೆ ವಿಶೇಷ ಪುಷ್ಪಾಲಂಕಾರ ಪೂಜೆ ನಡೆಯಲಿದೆ. ರಾತ್ರಿ 7.30ರಿಂದ ವಿವಿಧ ಸಂಘ-ಸಂಸ್ಥೆಗಳ ವತಿಯಿಂದ ಸೇವಾರೂಪದ ಉಲುಪೆ ಮೆರವಣಿಗೆ ಜರುಗಲಿದೆ. ರಾತ್ರಿ 8.30ರಿಂದ ಸುನಾದ ವಿನೋದಿನಿ (ರಿ.) ಇವರಿಂದ ದಾಸ ಸಂಕೀರ್ತನಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ 12.30ಕ್ಕೆ ಮಹಾಪೂಜೆ ನೆರವೇರಲಿದೆ.

ನವೆಂಬರ್ 21ರಂದು ಬೆಳಿಗ್ಗೆ 6.30ಕ್ಕೆ ಮಹಾಮಂಗಳಾರತಿ ಹಾಗೂ ಪ್ರಸಾದ ವಿತರಣೆ ನಡೆಯಲಿದೆ.

ನವೆಂಬರ್ 20ರ ಸೂರ್ಯೋದಯದಿಂದ ನವೆಂಬರ್ 21ರ ಸೂರ್ಯೋದಯದವರೆಗೆ ಮಂಗಳಾಚರಣೆಯೊಂದಿಗೆ ನಿರಂತರವಾಗಿ ನಡೆಯಲಿರುವ ಈ 85ನೇ ವರ್ಷದ ಏಕಾಹ ಭಜನಾ ಮಹೋತ್ಸವದಲ್ಲಿ ಸುಳ್ಯ ತಾಲೂಕಿನ ಸುಮಾರು 30 ಭಜನಾ ತಂಡಗಳು ಭಾಗವಹಿಸಿ ಭಜನಾ ಸೇವೆ ಸಲ್ಲಿಸಲಿವೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading