ದೇವಚಳ್ಳ : ಬಿಜೆಪಿ ನೇತೃತ್ವದಲ್ಲಿ ಪಾದಯಾತ್ರೆ, ಪ್ರತಿಭಟನೆ – ಗ್ರಾಮ ಪಂಚಾಯತ್‌ಗಳ ಸಮಸ್ಯೆ ಪರಿಹಾರಕ್ಕೆ ಆಗ್ರಹ

ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿನ ಗ್ರಾಮ ಪಂಚಾಯತ್‌ಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಪರಿಹರಿಸಿ, ಗ್ರಾಮೀಣ ಜನರಿಗೆ ಸಮರ್ಪಕ ಸರ್ಕಾರಿ ಸೇವೆ ಒದಗಿಸುವಂತೆ ಆಗ್ರಹಿಸಿ ಭಾರತೀಯ ಜನತಾ ಪಾರ್ಟಿ ದೇವಚಳ್ಳ ಗ್ರಾಮ ಸಮಿತಿಯ ವತಿಯಿಂದ ಪಾದಯಾತ್ರೆ ಹಾಗೂ ಪ್ರತಿಭಟನಾ ಸಭೆ ನ.13 ರಂದು ಗ್ರಾ.ಪಂ.ಎದುರು ನಡೆಯಿತು.

. . . . . . . . .

ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಅವರಿಗೆ ಗ್ರಾಮ ಪಂಚಾಯತ್‌ಗಳ ಮೂಲಕ ಮನವಿ ಸಲ್ಲಿಸಲಾಯಿತು.ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯಲ್ಲಿ ಗ್ರಾಮ ಪಂಚಾಯತ್‌ಗಳು ಪ್ರಮುಖ ಪಾತ್ರ ವಹಿಸುತ್ತಿದ್ದರೂ, ಪ್ರಸ್ತುತ ಅನುದಾನದ ಕೊರತೆ, ಸಿಬ್ಬಂದಿ ಅಭಾವ, ತಾಂತ್ರಿಕ ಸಮಸ್ಯೆಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನದಲ್ಲಿನ ವಿಳಂಬದಿಂದಾಗಿ ಗ್ರಾಮೀಣ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಈ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸುವಂತೆ ಮನವಿಯಲ್ಲಿ ಒತ್ತಾಯಿಸಿದ್ದಾರೆ.

. . . . . . .

ಗ್ರಾಮೀಣ ಜನರ ಹಕ್ಕುಗಳನ್ನು ರಕ್ಷಿಸುವುದು, ಗ್ರಾಮ ಪಂಚಾಯತ್‌ಗಳನ್ನು ಸಬಲಗೊಳಿಸುವುದು ಹಾಗೂ ಸಾರ್ವಜನಿಕರಿಗೆ ವಿಳಂಬವಿಲ್ಲದೆ ಸರ್ಕಾರಿ ಸೇವೆಗಳನ್ನು ಒದಗಿಸುವುದು ಸರ್ಕಾರದ ಕರ್ತವ್ಯವಾಗಿದೆ. ಈ ಹಿನ್ನೆಲೆಯಲ್ಲಿ ಮನವಿಯಲ್ಲಿನ ಬೇಡಿಕೆಗಳನ್ನು ಆದ್ಯತೆಯ ಮೇರೆಗೆ ಪರಿಗಣಿಸಿ ತುರ್ತು ಕ್ರಮ ಕೈಗೊಳ್ಳುವಂತೆ ಬಿಜೆಪಿ ಸುಳ್ಯ ಮಂಡಲದ ಪ್ರ.ಕಾರ್ಯದರ್ಶಿ ವಿನಯಕುಮಾರ್ ಕಂದಡ್ಕ ಹಾಗೂ ಬಿಜೆಪಿ ಜಿಲ್ಲಾ ವಕ್ತಾರ ವಿನಯಕುಮಾರ್ ಮುಳುಗಾಡು ಆಗ್ರಹಿಸಿದರು.‌

ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ, ಗುತ್ತಿಗಾರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕೃಷ್ಣಯ್ಯ ಮೂಲೆತೋಟ, ದೇವಚಳ್ಳ ಶಕ್ತಿ ಕೇಂದ್ರದ ಅಧ್ಯಕ್ಷ ದಿವಾಕರ ಮುಂಡೋಡಿ, ಗ್ರಾ.ಪಂ.ಮಾಜಿ ಅಧ್ಯಕ್ಷ ನಿತ್ಯಾನಂದ ಪಾರೆಪ್ಪಾಡಿ, ಸಹಕಾರಿ ಸಂಘದ ನಿರ್ದೇಶಕರಾದ ರವೀಂದ್ರ ಕಾನಾವು, ಜನಾರ್ಧನ ಅಚ್ರಪ್ಪಾಡಿ ಹಾಗೂ ದೇವ ಬೂತ್ ಸಮಿತಿ ಅಧ್ಯಕ್ಷ ಲಕ್ಷ್ಮೀಶ ಅಡ್ಡನಪಾರೆ, ಅರುಣ ಅಂಬೆಕಲು, ಗಣೇಶ್ ಕೇರ, ದಿನೇಶ್ ಕೇರ, ಧರ್ಮಪಾಲ ಮಾವಿನಕಟ್ಟೆ, ಮನಮೋಹನ ಅಂಬೆಕಲ್ಲು, ಚಂದ್ರಶೇಖರ ಗುಡ್ಡೆ ಮತ್ತಿತರರು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading