ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗಂಗಾಧರ ಮಟ್ಟಿ ಅವರಿಗೆ ಅಭಿನಂದನೆ – ನ.18ರಂದು ಪತ್ರಕರ್ತರ ಕುಟುಂಬ ಸಮ್ಮಿಲನ

ಸುಳ್ಯ : ಸುಳ್ಯ ಪ್ರೆಸ್ ಕ್ಲಬ್, ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ (ರಿ.) ಹಾಗೂ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ಘಟಕದ ಆಶ್ರಯದಲ್ಲಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗಂಗಾಧರ ಮಟ್ಟಿ ಅವರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಪತ್ರಕರ್ತರ ಕುಟುಂಬ ಸಮ್ಮಿಲನ ನವೆಂಬರ್ 18ರಂದು ಸಂಜೆ 5 ಗಂಟೆಗೆ ಸುಳ್ಯ ಪ್ರೆಸ್ ಕ್ಲಬ್ ಆವರಣದಲ್ಲಿ ನಡೆಯಲಿದೆ.

. . . . . . . . .

ಕಾರ್ಯಕ್ರಮವನ್ನು ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ. ಮುಸ್ತಾಫ ಉದ್ಘಾಟಿಸಲಿದ್ದು, ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ ಅಧ್ಯಕ್ಷತೆ ವಹಿಸಲಿದ್ದಾರೆ.ಕೆವಿಜಿ ಸುಳ್ಯ ಹಬ್ಬ ಸಮಿತಿಯ ಸ್ಥಾಪಕಾಧ್ಯಕ್ಷ ಎನ್. ಜಯಪ್ರಕಾಶ್ ರೈ ಅವರು ಅಭಿನಂದನೆ ಸಲ್ಲಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸುಳ್ಯ ಪೊಲೀಸ್ ಉಪನಿರೀಕ್ಷಕ ಉದಯ ರವಿ ಭಾಗವಹಿಸಲಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್ ಗೌರವಾಧ್ಯಕ್ಷ ಹರೀಶ್ ಬಂಟ್ವಾಳ್ ಅಭಿನಂದನಾ ಮಾತುಗಳನ್ನಾಡಲಿದ್ದಾರೆ.

. . . . . . .

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ ಹಾಗೂ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ಘಟಕದ ಅಧ್ಯಕ್ಷ ಯಶ್ಚಿತ್ ಕಾಳಮ್ಮನೆ ಉಪಸ್ಥಿತರಿರುವರು.ಈ ಸಂದರ್ಭದಲ್ಲಿ ಪತ್ರಕರ್ತರು ಹಾಗೂ ಅವರ ಕುಟುಂಬದ ಸದಸ್ಯರು ಭಾಗವಹಿಸಲಿದ್ದು, ಕಾರ್ಯಕ್ರಮದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗಂಗಾಧರ ಮಟ್ಟಿ ಅವರನ್ನು ಗೌರವಿಸಿ ಅಭಿನಂದಿಸಲಾಗುವುದು ಎಂದು ಪ್ರೆಸ್ ಕ್ಲಬ್ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading