ಜಾಕೆ ಮಾಧವ ಗೌಡರಿಗೆ ರಾಜ್ಯ ಸಹಕಾರ ರತ್ನ ಪ್ರಶಸ್ತಿ

ಸುಳ್ಯ: ಹಿರಿಯ ಸಹಕಾರಿ ಧುರೀಣ ಜಾಕೆ ಮಾಧವ ಗೌಡ ಅವರು ರಾಜ್ಯ ಸರ್ಕಾರದ ಪ್ರತಿಷ್ಠಿತ ಸಹಕಾರ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ನ. 14ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಸಹಕಾರ ಸಪ್ತಾಹದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

. . . . . . . . .

ಪಂಬೆತ್ತಾಡಿ ಸಹಕಾರ ಸಂಘದ ಅಧ್ಯಕ್ಷರಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿರುವ ಅವರು, ಪ್ರಸ್ತುತ ಸಂಘದ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಮಾಜಿ ಉಪಾಧ್ಯಕ್ಷ, ಸುಳ್ಯ ಎಪಿಎಂಸಿಯ ಮಾಜಿ ಅಧ್ಯಕ್ಷ, ಸುಳ್ಯ ಎಲ್‌ಡಿ ಬ್ಯಾಂಕ್ ಹಾಗೂ ಟಿಎಪಿಸಿಎಂಎಸ್‌ನ ಮಾಜಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

. . . . . . .

ಸಹಕಾರಿ ಕ್ಷೇತ್ರದ ವಿವಿಧ ಸಂಸ್ಥೆಗಳಲ್ಲಿ ಜವಾಬ್ದಾರಿಯುತ ಹುದ್ದೆಗಳನ್ನು ನಿರ್ವಹಿಸಿರುವ ಅವರ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading