ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ

ಸುಳ್ಯ: ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ‘ಕನ್ನಡ ಸಂಭ್ರಮ–2026’ ಕಾರ್ಯಕ್ರಮ ನ.6ರಂದು ಅಮರಜ್ಯೋತಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನ, ಅಮರಶ್ರೀಭಾಗ್‌ನಲ್ಲಿ ನಡೆಯಿತು.ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸ್ವರ್ಣಕಮಲ ಪುರಸ್ಕೃತ, ಸುಳ್ಯ ಗಾಂಧಿನಗರ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಡಾ. ಪ್ರದೀಪ್ ಕೆಂಚನೂರು ಮಾತನಾಡಿ, ಕರ್ನಾಟಕದ ವಿವಿಧ ಭಾಗಗಳಲ್ಲಿ ಬಳಕೆಯಲ್ಲಿರುವ ಕನ್ನಡದ ಭಾಷಾ ವೈವಿಧ್ಯತೆ ಹಾಗೂ ಭಾಷೆಯ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

. . . . . . . . .

ಈ ಸಂದರ್ಭದಲ್ಲಿ ಡಾ. ಪ್ರದೀಪ್ ಕೆಂಚನೂರು ಅವರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ ವಿ., ಉಪಪ್ರಾಂಶುಪಾಲ ಡಾ. ಶ್ರೀಧರ್ ಕೆ. ಹಾಗೂ ಎ.ಒ.ಎಲ್.ಇ. (ರಿ.) ಕಮಿಟಿ ‘ಬಿ’ಯ ಆಡಳಿತಾಧಿಕಾರಿ ಭವಾನಿಶಂಕರ ಅಡ್ತಲೆ ಸನ್ಮಾನ ಹಾಗೂ ಸ್ಮರಣಿಕೆ ಸಮರ್ಪಣೆ ನೆರವೇರಿಸಿದರು.

. . . . . . .

ಇದೇ ಸಂದರ್ಭದಲ್ಲಿ ನಿವೃತ್ತ ಎಫ್‌ಡಿಎ, ಗ್ರಂಥಾಲಯ ಸಿಬ್ಬಂದಿ ಹಾಗೂ ಕಲಾವಿದ ಶ್ರೀ ಗಂಗಾಧರ ನೆಲ್ಲಿಕೋಡಿ ಅವರನ್ನು ಗೌರವಿಸಲಾಯಿತು. ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆ ತೋರಿದ ಕಾಲೇಜಿನ ಎಂಬಿಎ ವಿಭಾಗದ ಪ್ರತಿಭಾವಂತ ವಿದ್ಯಾರ್ಥಿನಿಯರಾದ ರಚನಾ ಸಿ. ಮತ್ತು ಲಾವಣ್ಯ ಬಿ.ಎನ್. ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಎಕ್ಸ್‌ಪೋ ಪ್ರಾಜೆಕ್ಟ್ ಪ್ರದರ್ಶನ ಮತ್ತು ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಕಾಲೇಜಿನ ಉಪಪ್ರಾಂಶುಪಾಲ ಹಾಗೂ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ್ ಕೆ. ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಅಭಿಶೇಕ್ ಬಿ.ಎಲ್. ಹಾಗೂ ಲಿಖಿತ್ ಪಿ.ಎಲ್. ವಂದಿಸಿದರು. ಚಂದನ ಹೆಚ್.ಎಸ್., ದರ್ಶನ್ ಕೆ.ಎನ್. ಮತ್ತು ನಿಶಿತ ಕಾರ್ಯಕ್ರಮ ನಿರೂಪಿಸಿದರು.

ವಿದ್ಯಾರ್ಥಿ ಕ್ಷೇಮಾಧಿಕಾರಿಗಳಾದ ಡಾ. ಪ್ರಜ್ಞಾ ಎಂ.ಆರ್., ಪ್ರೊ. ಲೋಕೇಶ್ ಪಿ.ಸಿ. ಹಾಗೂ ಸಾಂಸ್ಕೃತಿಕ ಸಂಯೋಜಕ ಪ್ರೊ. ಕೃಷ್ಣರಾಜ್ ಎಂ.ವಿ. ಕಾರ್ಯಕ್ರಮ ಸಂಯೋಜಿಸಿದರು. ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದಿದ್ದು, ಕನ್ನಡದ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಬಿಂಬಿಸಿದ ‘ಕನ್ನಡ ಸಂಭ್ರಮ–2026’ ಸಂಭ್ರಮದಿಂದ ಸಂಪನ್ನಗೊಂಡಿತು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading