- Sunday
- November 15th, 2026
ಕಲ್ಲುಗುಂಡಿ: ಎಸ್‌ಕೆಎಸ್‌ಎಸ್‌ಎಫ್ ಕಲ್ಲುಗುಂಡಿ ಶಾಖೆಯ ವತಿಯಿಂದ ದೇಶದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮದಿನವನ್ನು ಸ್ವಚ್ಛತಾ ಕಾರ್ಯಕ್ರಮದ ಮೂಲಕ ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು. ಕಲ್ಲುಗುಂಡಿ ದೊಡ್ಡಡ್ಕ ಪರಿಸರದ ಹಯಾತುಲ್ ಇಸ್ಲಾಂ ಮದರಸ, ಸಮೀಪದ ಸ್ವಾಮಿ ಕೊರಗಜ್ಜ ದೇವಸ್ಥಾನದ ಪರಿಸರ, ಸಾರ್ವಜನಿಕ ಬಸ್ ತಂಗುದಾಣ, ರಾಜರಾಂಪುರ ಕಾಲನಿಯ ಬಸ್ ತಂಗುದಾಣ, ಶುದ್ಧ ಕುಡಿಯುವ ನೀರಿನ...
ಬಾಳುಗೋಡು: ಸುಳ್ಯ ವಿಧಾನಸಭಾ ಕ್ಷೇತ್ರದ ನಡುಗಲ್ಲು–ಹರಿಹರ ಪಲ್ಲತ್ತಡ್ಕ–ಬಾಳುಗೋಡು ರಸ್ತೆಯ ಪದಕ ಎಂಬಲ್ಲಿ ಮುಳುಗುಸೇತುವೆ ಇದ್ದಲ್ಲಿ ನೂತನ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕಿ ಭಾಗೀರಥಿ ಮುರುಳ್ಯ ಅವರು ಗುದ್ದಲಿಪೂಜೆ ನೆರವೇರಿಸಿದರು. ಸುಳ್ಯ ವಿಧಾನಸಭಾ ಕ್ಷೇತ್ರದ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯ ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಆದ್ಯತೆ ಮೇರೆಗೆ ಕೈಗೊಳ್ಳಬೇಕಾದ ಸೇತುವೆಗಳ ಪುನರ್ ನಿರ್ಮಾಣಕ್ಕಾಗಿ ಕರ್ನಾಟಕ...
ಸಂಪಾಜೆ: ಗ್ರಾಮದ ಕಲ್ಲುಗುಂಡಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು. ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಸೊಸೈಟಿ ಉಪಾಧ್ಯಕ್ಷರಾದ ಯಮುನಾ ಬಿ.ಎಸ್. ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಾಲವಿಕಾಸ ಸಮಿತಿ ಅಧ್ಯಕ್ಷೆ ಸಮೀರಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಕ್ಕಳಿಗಾಗಿ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಹಾಗೂ ಪೋಷಕರ...
