ಬೊಳುಬೈಲು ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ

ಜಾಲ್ಸೂರು, ನ.14: ಜಾಲ್ಸೂರು ಗ್ರಾಮದ ಬೊಳುಬೈಲು ಅಂಗನವಾಡಿ ಕೇಂದ್ರದಲ್ಲಿ ಬಾಲವಿಕಾಸ ಸಮಿತಿ ಹಾಗೂ ಪೋಷಕರ ಸಹಕಾರದೊಂದಿಗೆ ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

. . . . . . . . .

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲವಿಕಾಸ ಸಮಿತಿ ಅಧ್ಯಕ್ಷೆ ನಳಿನಾಕ್ಷಿ ಭರತ್ ಕುಂಬರ್ಚೋಡು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಾಲವಿಕಾಸ ಸಮಿತಿ ಸದಸ್ಯೆ ಪ್ರಸನ್ನಕುಮಾರಿ ಹೇಮಕರ ನೆಕ್ರಾಜೆ, ವಿಜಯ ಗ್ರಾಮಾಭಿವೃದ್ಧಿ ಸಂಘದ ಸದಸ್ಯೆ ಸುಮತಿ ದಿವಾಕರ ಹುಲಿಮನೆ ಹಾಗೂ ಮಕ್ಕಳ ಪೋಷಕರಾದ ರಶೀದ್ ಔರ ಬೊಳುಬೈಲು ಉಪಸ್ಥಿತರಿದ್ದರು.

. . . . . . .

ಮಕ್ಕಳಾದ ಸಾನ್ವಿ ಪಿ.ಡಿ. ಉಳಿಕೊಂಬೆ ಮತ್ತು ವಿಶಾಲ್ ಪುತ್ತೂರು ಕೇಕ್ ಕತ್ತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಕ್ಕಳಿಗಾಗಿ ವಿವಿಧ ಆಟೋಟ ಸ್ಪರ್ಧೆ ಹಾಗೂ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಮಕ್ಕಳಿಗೆ ಬಹುಮಾನ ವಿತರಿಸುವುದರ ಜೊತೆಗೆ ಭಾಗವಹಿಸಿದ ಎಲ್ಲ ಮಕ್ಕಳಿಗೂ ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು.

ಮಕ್ಕಳೊಂದಿಗೆ ಪೋಷಕರಿಗೂ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ, ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದವರಿಗೆ ಬಹುಮಾನ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸುಷ್ಮಾ ಲೋಕೇಶ್ ಪುತ್ತೂರು, ಲತೀಫ್ ಬೊಳುಬೈಲು, ಪುಷ್ಪಲತಾ ದಿವಾಕರ ಹಾಗೂ ಗಿರಿಜಾ ಗೋಪಾಲ ಅವರು ಮಕ್ಕಳಿಗೆ ಸಿಹಿ ವಿತರಿಸಿದರು.

ಅಂಗನವಾಡಿ ಮಕ್ಕಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಅಂಗನವಾಡಿ ಕಾರ್ಯಕರ್ತೆ ಬೇಬಿ ವಿಶ್ವನಾಥ ಸ್ವಾಗತಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading